ಲಡಾಖ್ ನಲ್ಲಿ ಯೋಧರೊಂದಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಂವಾದ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಜಮ್ಮು ಮತ್ತು ಕಾಶ್ಮೀರದ ಗಡಿಭಾಗ ಲಡಾಖ್ ಗೆ ಭೇಟಿ ನೀಡಿ, ಅಲ್ಲಿನ ಯೋಧರೊಂದಿಗೆ ಸಂವಾದ ನಡೆಸಿದರು.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗಡಿಭಾಗ ಲಡಾಖ್ ಗೆ ಭೇಟಿ ನೀಡಿ ಯೋಧರೊಂದಿಗೆ ಸಂವಾದ ನಡೆಸಿದರು
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗಡಿಭಾಗ ಲಡಾಖ್ ಗೆ ಭೇಟಿ ನೀಡಿ ಯೋಧರೊಂದಿಗೆ ಸಂವಾದ ನಡೆಸಿದರು

ಜಮ್ಮು ಮತ್ತು ಕಾಶ್ಮೀರ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಜಮ್ಮು ಮತ್ತು ಕಾಶ್ಮೀರದ ಗಡಿಭಾಗ ಲಡಾಖ್ ಗೆ ಭೇಟಿ ನೀಡಿ, ಅಲ್ಲಿನ ಯೋಧರೊಂದಿಗೆ ಸಂವಾದ ನಡೆಸಿದರು.

ಪಶ್ಚಿಮ ಲಡಾಖ್ ವಲಯದಲ್ಲಿ ಸಮುದ್ರ ಮಟ್ಟಕ್ಕಿಂತ 16 ಸಾವಿರದ 700 ಅಡಿ ಎತ್ತರದಲ್ಲಿರುವ ವಿಶ್ವದ ಎತ್ತರದ ವಾಯುನೆಲೆ  ದೌಲಾತ್ ಬೇಗ್ ಒಲ್ ದೈಗೂ  ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದರು. ಅಲ್ಲಿ -55 ಡಿಗ್ರಿ ಸೆಲ್ಸಿಯಸ್ ಗಿಂತಲೂ ಕಡಿಮೆ ಉಷ್ಣಾಂಶವಿದೆ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ  ಅಲ್ಲಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಂ , ಯೋಧರೊಂದಿಗೆ ಸಮಾಲೋಚಿಸಿದರು.

 ಭಾರತ- ಚೀನಾ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಥೋಯ್ಸಿ ವಾಯುನೆಲೆಗೆ ಆಗಮಿಸಿದ್ದ ನಿರ್ಮಲಾ ಸೀತಾರಾಮನ್, ಕಾರ್ಯಾಚರಣೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ನಂತರ ದೌಲಾತ್ ಬೇಗ್ ಒಲ್ ದೈಗೆ ಭೇಟಿ ನೀಡಿದ್ದರು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

 ಮೈ ನಡುಗಿಸುವ ಚಳಿಯಲ್ಲೂ ದೇಶಕ್ಕಾಗಿ ಹೋರಾಟ ನಡೆಸುತ್ತಿರುವ ಯೋಧರ ಪ್ರಾಮಾಣಿಕತೆಗೆ ರಕ್ಷಣಾ ಸಚಿವರು ಅಭಿನಂದನೆ ಸಲ್ಲಿಸಿದ್ದರು. ರಕ್ಷಣಾ ಸಚಿವರ ಈ ಭೇಟಿ ಯೋಧರಲ್ಲಿ ಇನ್ನೂ ಹೆಚ್ಚಿನ ಆತ್ಮಸ್ಥೈರ್ಯವನ್ನು ಮೂಡಿಸಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com