ದೇಶ

ಹಿಂದೂ ಮುಸ್ಮಿಂರ ನಡುವೆ ಒಡಕು ಮೂಡಿಸಲು ಬಿಜೆಪಿ ಯತ್ನ: ಅಖಿಲೇಶ್ ಆರೋಪ

ಹಿಂದೂ ಮುಸ್ಮಿಂರ ನಡುವೆ ಒಡಕು ಮೂಡಿಸಲು ಬಿಜೆಪಿ ಯತ್ನ: ಅಖಿಲೇಶ್ ಆರೋಪ
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ(ಸಾಂದರ್ಭಿಕ ಚಿತ್ರ)
Published On :

ಮುಂಬೈ: ಉತ್ತರ ಪ್ರದೇಶದಲ್ಲಿನ ಬಿಜೆಪಿ ಸರ್ಕಾರ ಹಿಂದೂ ಮುಸ್ಮಿಂರ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿದ್ದು, ದೇಶದಲ್ಲಿ ಸೌಹಾರ್ದ ವಾತವಾರಣ ಹಾಳುಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಮುಂಬೈಯಲ್ಲಿ ಸಮಾಜವಾದಿ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಎಲ್ಲಾರ ಖಾತೆಗಳಿಗೆ 15 ಲಕ್ಷ ಹಣ ಹಾಕುವುದಾಗಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಒಡೆದು ಹಾಳುವ ನೀತಿ ಅನುಸರಿಸುತ್ತಿದೆ. ಜನರನ್ನು ಮರೆತಿರುವುದರಿಂದ  ನಿರುದ್ಯೋಗ, ಬಡತನ, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅಪಾದಿಸಿದರು.

 ಆರ್ ಎಸ್ ಎಸ್ ಸರ್ಕಾರದ ಮಾರ್ಗದರ್ಶಕರಾಗಿದ್ದು, ಸಂವಿಧಾನವನ್ನು ತತ್ವಗಳನ್ನು ವಿರೂಪಗಳಿಸುವ ಹುನ್ನಾರ ನಡೆದಿದೆ. ಮಹಾರಾಷ್ಟ್ರ ಹಾಗೂ ಉತ್ತರಪ್ರದೇಶದಲ್ಲಿನ ಬಿಜೆಪಿ ಸರ್ಕಾರ  ರೈತರ  ಸಾಲಮನ್ನಾ ಮಾಡುವುದಾಗಿ ನೀಡಿರುವ ಭರವಸೆ ಪೊಳ್ಳು ಭರವಸೆಯಾಗಿದೆ ಎಂದು ಅಖಿಲೇಶ್ ಯಾದವ್  ಟೀಕಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.