ನವದೆಹಲಿ: 280 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಜ್ರ ವ್ಯಾಪಾರಿ ನೀರವ್ ಮೋದಿ, ಮೋದಿ ಸಹೋದರ ಹಾಗೂ ಆತನ ಪತ್ನಿ ವಿರುದ್ಧ ಕೇಸ್ ದಾಖಲಿಸಿದೆ.
ವಜ್ರ ವ್ಯಾಪಾರಿ ನೀರವ್ ಮೋದಿ 2017 ರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 280.70 ಕೋಟಿ ರೂಪಾಯಿ ವಂಚನೆ ಮಾಡಿದ್ದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ದೂರನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಮೋದಿ, ಮೋದಿಯ ಸಹೋದರ ನಿಶಾಲ್ ಹಾಗೂ ಅವರ ಪತ್ನಿ ಮೆಹುಲ್ ಚಿನುಭಾಯ್ ಚೋಕ್ಸಿ ಬ್ಯಾಂಕ್ ಗೆ ಮೋಸ ಮಾಡಿದ್ದು, ಇದರಿಂದ ಬ್ಯಾಂಕ್ ಗೆ ನಷ್ಟ ಉಂಟಾಗಿದೆ ಎಂದು ಬ್ಯಾಂಕ್ ದೂರಿನಲ್ಲಿ ತಿಳಿಸಿದೆ.