ನೀಟ್ ಪರೀಕ್ಷೆ ಬರೆಯಲು ಗರಿಷ್ಠ 25 ವರ್ಷ ಮಿತಿ: ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ(ನೀಟ್) ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ನಿಗದಿಮಾಡಿರುವ ಕೇಂದ್ರ ಸರ್ಕಾರ....
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ(ನೀಟ್) ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ನಿಗದಿಮಾಡಿರುವ ಕೇಂದ್ರ ಸರ್ಕಾರ ನಿರ್ಧಾರ ಪ್ರಶ್ನಿಸಿ ವಿದ್ಯಾರ್ಥಿಗಳ ತಂಡವೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.
ಜನವರಿ 22ರಂದು ಕೇಂದ್ರ ಹೊರಡಿಸಿದ್ದ ನೀಟ್ ಅಧಿಸೂಚನೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪದವಿ ವೈದ್ಯಕೀಯ ಶಿಕ್ಷಣ ಕಾಯ್ದೆ 1997ಕ್ಕೆ ತಿದ್ದುಪಡಿ ಮಾಡಿ, ನೀಟ್ ಪರೀಕ್ಷೆ ಬರೆಯಲು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 25 ವರ್ಷ ಹಾಗೂ ಮೀಸಲು ವರ್ಗದ ವಿದ್ಯಾರ್ಥಿಗಳಿಗೆ ಗರಿಷ್ಠ 30 ವರ್ಷ ನಿಗದಿ ಮಾಡಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ 25 ವರ್ಷ ಮೇಲ್ಪಟ್ಟ ಸಾವಿರಾರು ವಿದ್ಯಾರ್ಥಿಗಳು ಎಂಬಿಬಿಎಸ್, ಬಿಡಿಎಸ್ ಹಾಗೂ ಆಯುಷ್ ಕೋರ್ಸ್ ಗಾಗಿ ಪ್ರವೇಶ ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಳ್ಳಲಿದ್ದಾರೆ.
ಕೇಂದ್ರ ಸರ್ಕಾರದ ಈ ನಿರ್ಧಾರ ಶಿಕ್ಷಣ ಪಡೆಯುವ ನಮ್ಮ ಹಕ್ಕಿಗೆ ವಿರುದ್ಧವಾಗಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು 27 ವರ್ಷದ ನೀಟ್ ಆಕಾಂಕ್ಷಿ ವಾರಣಾಸಿಯ ಕಾರ್ತಿಕೆಯನ್ ರೈ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com