ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ: ಭದ್ರತಾ ಪಡೆಗಳ ಗುಂಡಿಗೆ ಯುವಕನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಓರ್ವ ಯುವಕ ಗಾಯಗೊಂಡಿರುವುದಾಗಿ ಸೋಮವಾರ ತಿಳಿದುಬಂದಿದೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಓರ್ವ ಯುವಕ ಗಾಯಗೊಂಡಿರುವುದಾಗಿ ಸೋಮವಾರ ತಿಳಿದುಬಂದಿದೆ.
ಆರೀಫ್ ಅಹಮದ್ ಲೋನ್ ಗಾಯಗೊಂಡ ಯುವಕರನಾಗಿದ್ದಾರೆ. ಹವೂರಾ ಗ್ರಾಮದ ಬಳಿ ಕೆಲ ದುಷ್ಕರ್ಮಿಗಳು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಯುವಕ ಗಾಯಗೊಂಡಿದ್ದಾನೆಂದು ವರದಿಗಳು ತಿಳಿಸಿವೆ.
ಗಾಯಗೊಂಡ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಬಳಿಕ ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತಂತೆ ಭದ್ರತಾ ಪಡೆಗಳ ವಿರುದ್ಧ ಆರೋಪ ಮಾಡಿರುವ ಗ್ರಾಮಸ್ಥರು, ಭದ್ರತಾ ಪಡೆಗಳು ಸ್ಥಳೀಯ ನಿವಾಸಿಗಳಿಗೆ ಹೊಡಿದಿದ್ದರು, ಅಲ್ಲದೆ, ಹವೂರಾದಲ್ಲಿರುವ ಆಸ್ತಿಗಳನ್ನು ವಶಕ್ಕೆ ಪಡೆಯಲು ಯತ್ನಿಸಿದ್ದರು. ಈ ಹಿನ್ನಲೆಯಲ್ಲಿ ಕಲ್ಲು ತೂರಾಟ ನಡೆದಿತ್ತು ಎಂದು ಹೇಳಿದ್ದಾರೆ.