ದಾಳಿಯ ಬಳಿಕ ಉಗ್ರರು ಕೂಡ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಘಟನೆಯ ಬಳಿಕ ಆಸ್ಪತ್ರೆಯ ಸುತ್ತ ಭದ್ರತಾ ಪಡೆಗಳು ಸುತ್ತುವರಿದಿದ್ದು, ಆಸ್ಪತ್ರೆಯನ್ನು ಸಂಪರ್ಕಿಸುವ ರಸ್ತೆಗಳಲ್ಲಿ ನಾಕಾ ಬಂದಿ ಹಾಕಲಾಗಿದೆ. ಅಂತೆಯೇ ಸುತ್ತಮುತ್ತಲ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.