ಭಾರತವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಗುರಿ ಹೊಂದಲು ಗಡಿ ಭಾಗದ ವಿದ್ಯಾರ್ಥಿಗಳಿಗೆ ಪ್ರಧಾನಿ ಕರೆ

ಸಿಕ್ಕಿಂ, ಲದ್ದಾಕ್ ಗಡಿ ಭಾಗದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಭಾರತವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಗುರಿ ಹೊಂದುವಂತೆ ಗಡಿ ಭಾಗದ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
ಸಿಕ್ಕಿಂ, ಲದ್ದಾಕ್ ಗಡಿ ಭಾಗದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಭಾರತವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಗುರಿ ಹೊಂದುವಂತೆ ಗಡಿ ಭಾಗದ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. 
 ಐಟಿಬಿಪಿಯೊಂದಿಗೆ ನವದೆಹಲಿಗೆ ಪ್ರವಾಸಕ್ಕಾಗಿ ಆಗಮಿಸಿದ್ದ ಗಡಿ ಭಾಗದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಹನ ನಡೆಸಿದ್ದು, ಸಂವೃದ್ಧ, ಭ್ರಷ್ಟಾಚಾರ ಮುಕ್ತ ದೇಶ ನಿರ್ಮಾಣ ಮಾಡುವುದರತ್ತ ಗುರಿ ಹೊಂದಲು ಕರೆ ನೀಡಿದ್ದಾರೆ. 
ಹೆಚ್ಚು ಕೆಲಸ ಮಾಡುವುದಕ್ಕೆ ಸಹಕಾರಿಯಾಗುವಂತೆ ಸದೃಢ ಆರೋಗ್ಯ, ಮಾನಸಿಕ ಸ್ಥಿತಿಯನ್ನು ಕಾಪಾಡಿಕೊಳ್ಳುವುದಕ್ಕಾಗಿ ಯೋಗ ಅಭ್ಯಾಸ ಮಾಡುವಂತೆಯೂ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಕೆ ಕರೆ ನೀಡಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ. 
ಇದೇ ವೇಳೆ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಅವರೊಂದಿಗೆ ಎಕ್ಸಾಮ್ ವಾರಿಯರ್ಸ್ ಪುಸ್ತಕದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಚುಂಗ್ಥಾಂಗ್ ಮತ್ತು ಲ್ಯಾಚೆನ್ ಭಾಗದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಅವರೊಂದಿಗೆ ಸಂವಹನ ನಡೆಸಿದ ವಿದ್ಯಾರ್ಥಿಗಳಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com