ರಫೆಲ್‌ ಡೀಲ್: ರಾಹುಲ್ ಗಾಂಧಿ ಆರೋಪ ತಳ್ಳಿಹಾಕಿದ ಕೇಂದ್ರ

ರಫೆಲ್‌ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಆರೋಪವನ್ನು ಕೇಂದ್ರ ಸರ್ಕಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ರಫೆಲ್‌ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಆರೋಪವನ್ನು ಕೇಂದ್ರ ಸರ್ಕಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು, ವಿಮಾನ ಖರೀದಿ ಒಪ್ಪಂದ ಅಂತಿಮಗೊಳಿಸುವ ಮುನ್ನ ಅಗತ್ಯವಿರುವ ಎಲ್ಲಾ ಕಾನೂನು ವಿಧಾನಗಳನ್ನು ಅನುಸರಿಸಲಾಗಿದೆ ಎಂದು ತಿರುಗೇಟು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ ರಫೆಲ್‌ ಪ್ರಸ್ತಾವ ಇಲ್ಲ, ಎಷ್ಟು ಮೊತ್ತಕ್ಕೆ ಇದನ್ನು ಖರೀದಿಸಲಾಗುತ್ತಿದೆ ಎಂಬ ಮಾಹಿತಿ ಇಲ್ಲ. ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ರಾಹುಲ್‌ ಗಾಂಧಿ ಅವರು ಆರೋಪಿಸಿದ್ದರು. 
ರಾಹುಲ್ ಗಾಂಧಿ ಆರೋಪಕ್ಕೆ ಸ್ಪಷ್ಟನೆ ನೀಡಿರುವ ರಕ್ಷಣಾ ಸಚಿವಾಲಯ, ಕಾಂಗ್ರೆಸ್‌ ಮಾಡುತ್ತಿರುವ ಆರೋಪಗಳು ಸಂಪೂರ್ಣ ನಿರಾಧಾರ, ಕಪೋಲ ಕಲ್ಪಿತ. ಇದು ಜನರನ್ನು ದಿಕ್ಕು ತಪ್ಪಿಸುವ ಆರೋಪವಷ್ಟೇ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಯುಪಿಎ ಅಧಿಕಾರಾವಧಿಯಲ್ಲಿ ರಫೆಲ್‌ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. 2016ರಲ್ಲಿ ಮಾಡಿಕೊಂಡಿರುವ ಒಪ್ಪಂದ ಈ ಹಿಂದಿಗಿಂತಲೂ ಸಾಕಷ್ಟು ಲಾಭದಾಯಕವಾಗಿದೆ. ಯುದ್ಧ ವಿಮಾನದ ಸಾಮರ್ಥ್ಯ, ಮೊತ್ತ, ಪೂರೈಕೆ, ನಿರ್ವಹಣೆ ಹಾಗೂ ತರಬೇತಿ ವಿಷಯದಲ್ಲೂ ಹೊಸ ಒಪ್ಪಂದ ಪಕ್ಕಾ ಆಗಿದೆ ಎಂದು ಸಚಿವಾಲಯ ಹೇಳಿದೆ.
ಕಾಂಗ್ರೆಸ್ ಒಪ್ಪಂದದಲ್ಲಿ ಇರದ ಅಂಶಗಳನ್ನು ಜನರಿಗೆ ತಿಳಿಸುವ ಮೂಲಕ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ. ಆದರೆ ಕೇವಲ ಉತ್ಪಾದನಾ ವಿಷಯದಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com