ಪ್ರಜಾಪ್ರಭುತ್ವದ ಬಗ್ಗೆ ನಮಗೆ ಪಾಠ ಮಾಡಬೇಡಿ. ಕಾಂಗ್ರೆಸ್ ನವರು ಪಂಜಾಬ್ ನಲ್ಲಿ ಅಕಾಲಿ ದಳದ ಜೊತೆಗೆ ಏನು ಮಾಡಿತು? ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಏನು ಮಾಡಿದೆ? ತಮ್ಮ ಮನಸ್ಸಿಗೆ ಬಂದಂತೆ ಎಷ್ಟು ರಾಜ್ಯ ಸರ್ಕಾರಗಳನ್ನು ವಜಾ ಮಾಡಿದ್ದೀರಿ. ಪ್ರಜಾಪ್ರಭುತ್ವದ ಬಗ್ಗೆ ಎಲ್ಲದ್ದನ್ನು ಇದು ಎತ್ತಿ ತೋರಿಸುತ್ತದೆ. ಆದರೆ, ನೀವು ಪ್ರಜಾತಂತ್ರದ ಬಗ್ಗೆ ಮಾತನಾಡುತ್ತೀರಿ. ಹಿಂದಿನ ಸರ್ಕಾರಗಳಿಗಿಂತ ಪ್ರಸ್ತುತ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್'ಡಿಎ ಸರ್ಕಾರ ಹೆಚ್ಚಿನ ಪ್ರಮಾಣದ ರಸ್ತೆ ನಿರ್ಮಾಣ ಮಾಡುತ್ತಿದೆ. ದೇಶದಾದ್ಯಂತ ಎಲ್ಲಾ ವಲಯಗಳ ಮೂಲಸೌಕರ್ಯ ಯೋಜನೆಗಳಿಗೆ ಉತ್ತೇಜನವನ್ನು ನೀಡಿದೆ.