ಐಎನ್ಎಕ್ಸ್ ಮೀಡಿಯಾ ಪ್ರಕರಣ: ಇಂದ್ರಾಣಿ ಮುಖರ್ಜಿಗೆ 14 ದಿನ ನ್ಯಾಯಾಂಗ ಬಂಧನ

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ....
ಇಂದ್ರಾಣಿ ಮುಖರ್ಜಿ
ಇಂದ್ರಾಣಿ ಮುಖರ್ಜಿ
Updated on: 
ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಯನ್ನು ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಎರಡು ದಿನ ಸಿಬಿಐ ವಶದಲ್ಲಿದ್ದ ಇಂದ್ರಾಣಿ ಮುಖರ್ಜಿಯನ್ನು ವಿಚಾರಣೆ ಬಳಿಕ ಸಿಬಿಐ ಅಧಿಕಾರಿಗಳು ಇಂದು ವಿಶೇಷ ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಧೀಶ ಸುನಿಲ್ ರಾಣಾ ಅವರು ಆರೋಪಿಯನ್ನು ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
2007ರಲ್ಲಿ ಮಾರಿಷಸ್‌ನಿಂದ ಬಂಡವಾಳ ಸಂಗ್ರಹಿಸುವಾಗ ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯ (ಎಫ್ಐಪಿಬಿ) ನಿಯಮಾವಳಿಗಳ ಉಲ್ಲಂಘನೆ ಆಗಿದೆ ಎಂದು ಐಎನ್ಎಕ್ಸ್ ಮೀಡಿಯಾದ ಸಂಸ್ಥಾಪಕ ಪೀಟರ್ ಮುಖರ್ಜಿ ಹಾಗೂ ಅವರ ಹೆಂಡತಿ ಇಂದ್ರಾಣಿ ಅವರ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com