ಪಾಕ್ ಗುಂಡಿನ ದಾಳಿಗೆ ನಮ್ಮ ಯೋಧರು ಸಾಯುತ್ತಿದ್ದರೆ, ಸರ್ಕಾರ ಪಕೋಡ ಬಗ್ಗೆ ಮಾತನಾಡುತ್ತಿದೆ: ಶಿವಸೇನೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪಕೋಡ ಹೇಳಿಕೆಗೆ ಸಂಬಂಧಿಸಿದಂತೆ ಮಿತ್ರ ಪಕ್ಷ ಶಿವಸೇನೆ ಗುರುವಾರ....
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪಕೋಡ ಹೇಳಿಕೆಗೆ ಸಂಬಂಧಿಸಿದಂತೆ ಮಿತ್ರ ಪಕ್ಷ ಶಿವಸೇನೆ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಗಡಿಯಲ್ಲಿ ಪಾಕಿಸ್ತಾನ ಗುಂಡಿನ ದಾಳಿಗೆ ನಮ್ಮ ಯೋಧರು ಸಾಯುತ್ತಿದ್ದರೆ ಸರ್ಕಾರ ಪಕೋಡ ಬಗ್ಗೆ ಮಾತನಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿ ಸೇರಿದಂತೆ ಪ್ರಮುಖ ವಿಷಯಗಳಿಂದ ಜನರ ಗಮನ ಬೇರೆ ಕಡೆ ಸೆಳೆಯಲು ಮೋದಿ ಸರ್ಕಾರ ಯತ್ನಿಸುತ್ತಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಆರೋಪಿಸಿದೆ.
ಪಾಕಿಸ್ತಾನವನ್ನು 'ಸೋಲಿಸಿ' ಮತ್ತು 'ವಿಭಜಿಸಿದ್ದಕ್ಕೆ' ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಶ್ಲಾಘಿಸಿದ ಶಿವಸೇನೆ, ಕಳೆದ ನಾಲ್ಕು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರ್ಕಾರ ಕಾಶ್ಮೀರ ವಿವಾದ ಬಗೆಹರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ.
ಕಾಂಗ್ರೆಸ್ ಗೆ ಪಾಕಿಸ್ತಾನಕ್ಕೆ ಪಾಠ ಕಲಿಸುವ ಧೈರ್ಯ ಇಲ್ಲ. ಆದರೆ ಇಂದಿರಾ ಗಾಂಧಿ ಅವರು ಪಾಕಿಸ್ತಾನಕ್ಕೆ ಅಮೆರಿಕದ ಬೆಂಬಲ ಇದ್ದರೂ ಅದನ್ನು ಸೋಲಿಸಿದ್ದರು ಮತ್ತು ಆ ದೇಶ ಇಬ್ಭಾಗ ಮಾಡಿದ್ದರು ಎಂದು ಶಿವಸೇನೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com