ಕಿರಣ್ ರಿಜಿಜು ವಿರುದ್ಧ ಹಕ್ಕುಚ್ಯುತಿ ಮಂಡನೆ:ರೇಣುಕಾ ಚೌದರಿ

ಕೇಂದ್ರ ಗೃಹ ಸಚಿವಾಲಯ ರಾಜ್ಯ ಸಚಿವ ಕಿರಣ್ ರಿಜಿಜು ವಿರುದ್ಧ ಹಕ್ಕು ಚ್ಯುತಿ ಮಂಡಿಸಲಾಗುವುದು ಎಂದು ಕಾಂಗ್ರೆಸ್ ಸದಸ್ಯೆ ರೇಣುಕಾ ಚೌದರಿ ಹೇಳಿದ್ದಾರೆ.
ರಾಜ್ಯಸಭೆ ಕಾಂಗ್ರೆಸ್ ಪಕ್ಷದ ಸಂಸದೆ ರೇಣುಕಾಚೌದರಿ ಅವರ (ಸಾಂದರ್ಭಿಕ ಚಿತ್ರ)
ರಾಜ್ಯಸಭೆ ಕಾಂಗ್ರೆಸ್ ಪಕ್ಷದ ಸಂಸದೆ ರೇಣುಕಾಚೌದರಿ ಅವರ (ಸಾಂದರ್ಭಿಕ ಚಿತ್ರ)

ನವದೆಹಲಿ: ಪ್ರಧಾನಿ ನರೇಂದ್ರಮೋದಿ ರಾಜ್ಯಸಭೆಯಲ್ಲಿ ನಿನ್ನೆ ತಮ್ಮನ್ನು ಕುರಿತು ನೀಡಿದ್ದ ಹೇಳಿಕೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಹಾಕಿರುವ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸಚಿವ ಕಿರಣ್ ರಿಜಿಜು ವಿರುದ್ಧ ಹಕ್ಕು ಚ್ಯುತಿ ಮಂಡಿಸಲಾಗುವುದು ಎಂದು ಕಾಂಗ್ರೆಸ್ ಸದಸ್ಯೆ ರೇಣುಕಾ ಚೌದರಿ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ , ಕಾಂಗ್ರೆಸ್ ಪಕ್ಷದ ಸದಸ್ಯೆ ರೇಣುಕಾ ಚೌದರಿ ಕುರಿತು ನೀಡಿದ್ದ ಹೇಳಿಕೆಯನ್ನು ಪೌರಾಣಿಕ ಪಾತ್ರದ ಶೂರ್ಪನಖಿ ಎಂದು ಕಿರಣ್ ರಿಜಿಜು ಫೇಸ್ಬುಕಿನಲ್ಲಿ  ಹಾಕಿದ್ದಾರೆ ಎಂದು ಅವರು ಆರೋಪಿಸಿದರು.

 ರಾಜ್ಯಸಭೆಯಲ್ಲಿ ನಿನ್ನೆ ಪ್ರಧಾನಿ ನರೇಂದ್ರಮೋದಿ ಭಾಷಣ ಮಾಡುವಾಗ ರೇಣುಕಾ ಚೌದರಿ ಗಹಗಹಿಸಿ ನಕ್ಕಿದ್ದರು. ಈ ವೇಳೆ ಮೋದಿ, ರಾಮಾಯಣದ ನಂತರ ಈಗಲೇ ನಗು ಕೇಳುತ್ತಿದ್ದೇನೆ ಎಂದು ಟಾಂಗ್ ನೀಡಿದ್ದರು.

ತಮ್ಮ ನಗುವನ್ನು ರಾಮಾಯಣದ ಶೂರ್ಪನಖಿಗೆ ಹೋಲಿಸುವ ಮೂಲಕ ಪ್ರಧಾನಿ ನರೇಂದ್ರಮೋದಿ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ರೇಣುಕಾ ಚೌದರಿ ಆರೋಪಿಸಿದ್ದರು.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com