ದೇಶ

ಬಿಕನೆರ್ ಭೂ ಹಗರಣ: ರಾಬರ್ಟ್‌ ವಾದ್ರಾ ಆಪ್ತನ ಮನೆ ಮೇಲೆ ಇಡಿ ದಾಳಿ

ಬಿಕನೆರ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಅವರ...

ಬಿಕನೆರ್ ಭೂ ಹಗರಣ: ರಾಬರ್ಟ್‌ ವಾದ್ರಾ ಆಪ್ತನ ಮನೆ ಮೇಲೆ ಇಡಿ ದಾಳಿ
ರಾಬರ್ಟ್ ವಾದ್ರಾ
Published On :
ಫರಿದಾಬಾದ್: ಬಿಕನೆರ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಅವರ ಆಪ್ತ ಹಾಗೂ ಕಾಂಗ್ರೆಸ್ ನಾಯಕ ಮಹೇಶ್ ನಗರ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ದಾಳಿ ನಡೆಸಿದೆ.
ಹರಿಯಾಣದ ಫರಿದಾಬಾದ್ ನಲ್ಲಿರುವ ನಗರ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಇಡಿ ಮೂಲಗಳ ಪ್ರಕಾರ, ಮಹೇಶ್ ನಗರ ಖಾಸಗಿ ಸಂಸ್ಥೆ ಸ್ಕೈಲೈಟ್ ಹಾಸ್ಪಿಟಾಲಿಟಿಯ ಪ್ರತಿನಿಧಿಯಾಗಿದ್ದು, ರಾಜಸ್ಥಾನದ ಬಿಕನೆರ್ ಜಿಲ್ಲೆಯಲ್ಲಿ ಭೂಮಿ ಖರೀದಿಸಿದ್ದರು. ಸ್ಕೈಲೈಟ್ ಹಾಸ್ಪಿಟಾಲಿಟಿ ಸಂಸ್ಥೆಗೂ ಮತ್ತು ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೂ ನಂಟು ಇದೆ ಎನ್ನಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಡಿಸೆಂಬರ್ 22ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಅಕ್ರಮ ಹಣ ವಹಿವಾಟು ನಡೆಸಿದ ಆರೋಪದ ಮೇಲೆ ಜೈಪ್ರಕಾಶ್ ಬಗರ್ವ ಮತ್ತು ಅಶೋಕ್ ಕುಮಾರ್ ಅವರನ್ನು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.