ಪ್ರತಿಭಟನೆ ನಡೆಸುತ್ತಿರುವ ಪೋಷಕರು
ದೇಶ
2ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಖಾಸಗಿ ಶಾಲಾ ಶಿಕ್ಷಕನ ಬಂಧನ
ಎರಡನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕನನ್ನು ಬಂಧಿಸಿರುವುದಾಗಿ...
ಕೋಲ್ಕತ್ತಾ: ಎರಡನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕನನ್ನು ಬಂಧಿಸಿರುವುದಾಗಿ ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ನೃತ್ಯ ಶಿಕ್ಷಕ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೋಷಕರು ಆರೋಪಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ನೂರಾರು ಪೋಷಕರು ಕಾರ್ಮೆಲ್ ಪ್ರಾಥಮಿಕ ಶಾಲೆಯ ಬಳಿ ಜಮಾಯಿಸಿ, ಕಾಮುಕ ಶಿಕ್ಷಕನನ್ನು ಅಮಾನತುಗೊಳಿಸಬೇಕು ಮತ್ತು ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಿನ್ನೆ ಬಾಲಕಿ ತನ್ನ ಪೋಷಕರ ಬಳಿ ಶಿಕ್ಷಕನ ವರ್ತನೆ ಬಗ್ಗೆ ಹೇಳಿಕೊಂಡಿದ್ದು, ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಶಿಕ್ಷಕನನ್ನು ವಶಕ್ಕೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೋಷಕರು ಪ್ರತಿಭಟನೆ ನಡೆಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದಿದ್ದು, ಆರೋಪಿ ಶಿಕ್ಷಕನನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಬಂಧಿಸಿ ಕರೆದೊಯ್ಯುವ ವೇಳೆ ಪೋಷಕರು ಆರೋಪಿಯ ಮೇಲೆ ಹಲ್ಲೆಗೆ ಮುಂದಾದ ಪ್ರಸಂಗವೂ ನಡೆಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ