ಭೂಕಬಳಿಕೆ ಪ್ರಕರಣ: ಮಾಜಿ ಸಿಎಂ ಚಾಂಡಿ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ಕೇರಳ ಹೈಕೋರ್ಟ್!

ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಮುಖ್ಯಮಂತ್ರಿ ಒಮನ್ ಚಾಂಡಿ ಸೇರಿದಂತೆ ಹಿರಿಯ ಅಧಿಕಾರಿ ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ನಿಗ್ರಹ...
ಒಮನ್ ಚಾಂಡಿ
ಒಮನ್ ಚಾಂಡಿ
ಕೊಚ್ಚಿ: ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಮುಖ್ಯಮಂತ್ರಿ ಒಮನ್ ಚಾಂಡಿ ಸೇರಿದಂತೆ ಹಿರಿಯ ಅಧಿಕಾರಿ ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕಳೆದ ವರ್ಷ ದಾಖಲಿಸಿದ್ದ ಎಫ್ಐಆರ್ ಅನ್ನು ಕೇರಳ ಹೈಕೋರ್ಟ್ ರದ್ದು ಪಡಿಸಿದೆ. 
ಕಳೆದ ವರ್ಷ ಫೆಬ್ರವರಿಯಲ್ಲಿ ಒಮನ್ ಚಾಂಡಿ, ಕಾಂಗ್ರೆಸ್ ಮುಖಂಡರು, ಅಂದಿನ ಪ್ರಧಾನ ಕಾರ್ಯದರ್ಶಿ ಇಕೆ ಭರತ್ ಭೂಷಣ್ ಮತ್ತು ಇತರ ಮೂವರ ವಿರುದ್ಧ ಎಸಿಬಿ ಎಫ್ಐಆರ್ ದಾಖಲಿಸಿತ್ತು. ಇದನ್ನು ಇದೀಗ ಕೇರಳ ಹೈಕೋರ್ಟ್ ರದ್ದು ಪಡಿಸಿದೆ. 
ಸರ್ಕಾರಿ ಜಮೀನನನ್ನು ಖಾಸಗಿ ಬಿಲ್ಡರ್ ಗಳಿಗೆ ನೀಡಲಾಗಿದೆ ಎಂಬ ಆರೋಪ ಒಮನ್ ಚಾಂಡಿ ಸರ್ಕಾರದ ಮೇಲಿತ್ತು. ಇದೇ ಆರೋಪವನ್ನು ಮುಂದಿಟ್ಟುಕೊಂಡು 2016ರ ಕೇರಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ವಿಪಕ್ಷಗಳು ಉಮನ್ ಚಾಂಡಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು.
2016ರಲ್ಲಿ ಸರ್ಕಾರ ಸಿಪಿಐ(ಎಂ) ಪಾಲಿಟ್ ಬ್ಯುರೋ ಸದಸ್ಯ ಪಿಣರಾಯಿ ವಿಜಯನ್ ಕೇರಳದಲ್ಲಿ 2016ರಲ್ಲಿ ಸರ್ಕಾರ ರಚಿಸಿದ ಬಳಿಕ ಈ ಭೂಕಬಳಿಕೆ ಪ್ರಕರಣದ ತನಿಖೆಗಾಗಿ ವಿಜಿಲೆನ್ಸ್ ಬ್ಯೂರೋದ ಮುಖ್ಯಸ್ಥರನ್ನಾಗಿ ಜಾಕೋಬ್ ಥಾಮನ್ಸ್ ರನ್ನು ನೇಮಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com