ಮೇ.6ಕ್ಕೆ ನೀಟ್ ಪರೀಕ್ಷೆ; ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತೆ ಮತ್ತು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ:ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್) ಮೇ 6ರಂದು ನಡೆಯಲಿದೆ ಎಂದು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಶುಕ್ರವಾರ ಪ್ರಕಟಿಸಿದೆ.
ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಇಂದು ಆರಂಭವಾಗಲಿದೆ. ಇಂದಿನಿಂದ ಒಂದು ತಿಂಗಳ ಕಾಲ ಮಾರ್ಚ್ 9ರವರೆಗೆ ರಾತ್ರಿ 11.50ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್ 10 ರಾತ್ರಿ 11.50ರೊಳಗೆ ಶುಲ್ಕ ಪಾವತಿಸಬಹುದು ಎಂದು ತಿಳಿಸಿದೆ.
ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ ಹಾಗೂ ಮೇಘಾಲಯ ರಾಜ್ಯಗಳ ಹೊರತುಪಡಿಸಿ ಬೇರೆಲ್ಲಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಬೇರೆಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ನೀಡಬೇಕು. ಆಧಾರ್ ಸಂಖ್ಯೆ ಮತ್ತು ಅರ್ಜಿ ಸಲ್ಲಿಕೆಯಲ್ಲಿ ನೀಡಲಾದ ವಿವರಗಳಲ್ಲಿ ಹೊಂದಾಣಿಕೆಯಾಗದಿದ್ದರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ.
ಪ್ರವೇಶ ಸಂದರ್ಭದಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಕನಿಷ್ಠ 17 ಮತ್ತು ಗರಿಷ್ಠ 25 ವರ್ಷ ಪೂರೈಸಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಒಬಿಸಿ ಮತ್ತು ವಿಶೇಷಚೇತನರ ಕಾಯ್ದೆ 2016ರ ಪ್ರಕಾರ ವಿಶೇಷ ಚೇತನ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿಯಿರುತ್ತದೆ. 
ದ್ವಿತೀಯ ಪಿಯುಸಿ ಅಥವಾ 12ನೇ ತರಗತಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ ಮತ್ತು ಇಂಗ್ಲಿಷ್ ನಲ್ಲಿ ತೇರ್ಗಡೆ ಹೊಂದಿ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಅಥವಾ ಜೈವಿಕ ತಂತ್ರಜ್ಞಾನದಲ್ಲಿ ಒಟ್ಟು ಶೇಕಡಾ 50ರಷ್ಟು ಅಂಕ ಗಳಿಸಿದವರು ನೀಟ್ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳು ಕನಿಷ್ಟ ಶೇಕಡಾ 40ರಷ್ಟು ಅಂಕಗಳನ್ನು ಗಳಿಸಿರಬೇಕು.
ಸಿಬಿಎಸ್ಸಿ ವೆಬ್ ಸೈಟ್ www.cbseneet.nic.in ಮೂಲಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com