ನವದೆಹಲಿ: ಆಂಧ್ರ ಪ್ರದೇಶದ ವಿಶೇಷ ಸ್ಥಾನಮಾನಕ್ಕೆ ಅನುದಾನ ಬಿಡುಗಡೆ ಮತ್ತು ಪೋಲವರಂ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವುದು ಸೇರಿದಂತೆ ಆಂಧ್ರದ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಕರೆ ನೀಡಿದ್ದಾರೆ.
ವಿಶೇಷ ಸ್ಥಾನಮಾನಕ್ಕಾಗಿ ಆಂಧ್ರ ಪ್ರದೇಶ ಜನತೆಯ ಬೇಡಿಕೆಯನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಮತ್ತು ಈ ಸಂಬಂಧ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಲು ಇದು ಸೂಕ್ತ ಸಮಯ. ಈ ಮೂಲಕ ಆಂಧ್ರಕ್ಕೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಆಡಳಿತರೂಢ ಎನ್ ಡಿಎ ಮಿತ್ರ ಪಕ್ಷ ಟಿಡಿಪಿ ಸಹ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿದೆ.