ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್: ಕಿರಣ್ ರಿಜಿಜು ವಿರುದ್ಧ ರೇಣುಕಾ ಚೌಧರಿ ಹಕ್ಕುಚ್ಯುತಿ ಮಂಡನೆ

ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಹಾಕಿರುವ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸಚಿವ ಕಿರಣ್ ರಿಜಿಜು ವಿರುದ್ಧ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ.
ಕಿರಣ್ ರಿಜಿಜು
ಕಿರಣ್ ರಿಜಿಜು
ನವದೆಹಲಿ: ಪ್ರಧಾನಿ ನರೇಂದ್ರಮೋದಿ ರಾಜ್ಯಸಭೆಯಲ್ಲಿ ನಿನ್ನೆ ತಮ್ಮನ್ನು ಕುರಿತು ನೀಡಿದ್ದ ಹೇಳಿಕೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಹಾಕಿರುವ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸಚಿವ ಕಿರಣ್ ರಿಜಿಜು ವಿರುದ್ಧ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ. 
ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ಸದಸ್ಯೆ ರೇಣುಕಾ ಚೌದರಿ ಕುರಿತು ನೀಡಿದ್ದ ಹೇಳಿಕೆಯನ್ನು ಪೌರಾಣಿಕ ಪಾತ್ರದ ಶೂರ್ಪನಖಿ ಎಂದು ಕಿರಣ್ ರಿಜಿಜು ಫೇಸ್ಬುಕಿನಲ್ಲಿ ಹಾಕಿದ್ದರು ಈ ಹಿನ್ನೆಲೆಯಲ್ಲಿ ರೇಣುಕಾ ಚೌಧರಿ ಕಿರಣ್ ರಿಜಿಜು ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿದ್ದಾರೆ. 
ರೇಣುಕಾ ಚೌಧರಿ ಅವರ ಹಕ್ಕುಚ್ಯುತಿ ಮಂಡನೆಯನ್ನು ಬೆಂಬಲಿಸಿರುವ ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ತಮ್ಮ ಹೇಳಿಕೆ ಮೂಲಕ ರಾಜಕೀಯ ಸಂಭಾಷಣೆಯ ಮಿತಿಯನ್ನು ಮೀರಿದ್ದಾರೆ. ಆದ್ದರಿಂದ ಪ್ರಧಾನಿ ಕ್ಷಮೆ ಯಾಚಿಸಬೇಕು ಎಂದು ಆನಂದ್ ಶರ್ಮಾ ಆಗ್ರಹಿಸಿದ್ದಾರೆ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com