ಅಯೋಧ್ಯೆ ವಿವಾದ: ಮಸೀದಿಗೆ ಮೀಸಲಿಟ್ಟ ಜಾಗ ಮಾರಲ್ಲ- ಮುಸ್ಲಿಂ ಕಾನೂನು ಮಂಡಳಿ

ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮುಂಚಿತ ನಿಲುವನ್ನೇ ಪ್ರತಿಪಾದಿಸಿರುವ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು, ಮಸೀದಿ ನಿರ್ಮಾಣಕ್ಕೆ ಮೀಸಲಿಟ್ಟಿರುವ ಜಾಗವನ್ನು ಮಾರಾಟ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹೈದರಾಬಾದ್: ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮುಂಚಿತ ನಿಲುವನ್ನೇ ಪ್ರತಿಪಾದಿಸಿರುವ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು, ಮಸೀದಿ ನಿರ್ಮಾಣಕ್ಕೆ ಮೀಸಲಿಟ್ಟಿರುವ ಜಾಗವನ್ನು ಮಾರಾಟ ಮಾಡಲು ಅಥವಾ ಬಿಟ್ಟುಕೊಡಲು ಸಾಧ್ಯವೇ ಇಲ್ಲ ಎಂದು ಶುಕ್ರವಾರ ಹೇಳಿದೆ. 
ಹೈದರಾಬಾದ್ ನಲ್ಲಿ ನಡೆದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ರೀತಿಯ ನಿರ್ಧಾರವನ್ನು ಕೈಗೊಂಡಿದ್ದಾರೆಂದು ತಿಳಿದುಬಂದಿದೆ. 
ಆಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿಗೆ ಬದ್ಧವಾಗಿರುವುದಾಗಿಯೂ ಮಂಡಳಿಯ ಕಾರ್ಯದರ್ಶಿ ಮೌಲಾನಾ ಉಮ್ರೈನ್ ಮೆಹರೂಫ್ ರೆಹ್ಮನಿಯವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com