ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 4 ಉಗ್ರರನ್ನು ಸದೆಬಡಿದ ಸೇನೆ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಸುಂಜುವಾನ್ ಸೇನಾ ಶಿಬಿರದ ಮೇಲಿನ ಉಗ್ರರ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ನಾಲ್ವರು ಉಗ್ರರನ್ನು...
ಸೇನಾ ಶಿಬಿರದ ಮೇಲೆ ಉಗ್ರರ ದಾಳಿ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ ನಿಯೋಜನೆ ಚಿತ್ರ
ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಸುಂಜುವಾನ್ ಸೇನಾ ಶಿಬಿರದ ಮೇಲಿನ ಉಗ್ರರ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ನಾಲ್ವರು ಉಗ್ರರನ್ನು ಸೇನಾಪಡೆ ಸದೆಬಡಿದಿದೆ.
2016ರಲ್ಲಿ ನಡೆದ ಉರಿ ದಾಳಿಯ ನಂತರ ಇದೇ ಮೊದಲ ಬಾರಿಗೆ ನಡೆದಿರುವ ದೊಡ್ಡ ಪ್ರಮಾಣದ ದಾಳಿ ಇದಾಗಿದೆ. ಭಾರಿ ಪ್ರಮಾಣದ ಸಶಸ್ತ್ರಗಳೊಂದಿಗೆ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, 24 ಗಂಟೆ ಕಳೆದರೂ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
ದಾಳಿಯಿಂದಾಗಿ 11 ಮಂದಿ ಗಾಯಗೊಂಡಿದ್ದಾರೆ. ಜೈಸ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ.
ಅಂತಾರಾಷ್ಟ್ರೀಯ ಗಡಿ ರೇಖೆ ರಜೋರಿ ಜಿಲ್ಲೆಯ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆಯಿಂದ ಮಹಿಳೆಯೊಬ್ಬರು ಶನಿವಾರ ಮೃತಪಟ್ಟಿದ್ದರು. ನಂತರ ಸೇನಾ ಶಿಬಿರದ ಸುತ್ತಮುತ್ತಲಿನ ಶಾಲೆಗಳು ಬಂದ್ ಆಗಿದ್ದು, ಜಮ್ಮುವಿನ ಭಾರಿ ಭದ್ರತೆ ಏರ್ಪಡಿಸಲಾಗಿದೆ.