ಸುಂಜ್ವಾನ್ ಉಗ್ರರ ದಾಳಿ: ಗಡಿ ಗ್ರಾಮಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರಗ ಗಡಿ ಗ್ರಾಮಗಳಲ್ಲಿ ರೆಡ್ ಅಲರ್ಟ್ ಘೋಷಮೆ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಜಮ್ಮು: ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರಗ ಗಡಿ ಗ್ರಾಮಗಳಲ್ಲಿ ರೆಡ್ ಅಲರ್ಟ್ ಘೋಷಮೆ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 
ಪಂಜಾಬ್ ಪ್ರವೇಶ ಪ್ರಮುಖ ಪ್ರದೇಶವಾಗಿರುವ ಮಧೊಪುರ್ ಬಳಿ ಬರುವ ಪ್ರತೀ ವಾಹನ ಹಾಗೂ ಜನರನ್ನು ಭದ್ರತಾಪಡೆಗಳು ತಪಾಸಣೆಗೊಳಪಡಿಸುತ್ತಿವೆ. 
ಜನರ ಸುರಕ್ಷತೆಗಾಗಿ ಗಡಿ ಭಾಗದಲ್ಲಿ ಬರುವ ಪ್ರತೀಯೊಂದು ವಾಹನವನ್ನೂ ತಪಾಸಣೆಗೊಳಪಡಿಸಲಾಗುತ್ತಿದೆ. ಅನುಮಾನಾಸ್ಪದವಾಗಿ ಕಂಡು ಬಂದ ಜನರನ್ನು ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಪಂಜಾಬ್ ಪೊಲೀಸ್ ಅಧಿಕಾರಿ ಸತೀಶ್ ಚೌಧರಿಯವರು ಹೇಳಿದ್ದಾರೆ. 
ನಿನ್ನೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರ ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ ಸುಬೇದಾರ್ ಲಾಲ್ ಚೌಧರಿ ಮತ್ತು ಸುಬೇದಾರ್ ಮೊಹಮ್ಮದ್ ಅಶ್ರಫ್ ಮಿರ್ ಎಂಬ ಅಧಿಕಾರಿಗಳು ಹುತಾತ್ಮರಾಗಿದ್ದಾರೆ, ಅಲ್ಲದೆ, ಓರ್ವ ನಾಗರೀಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಉಗ್ರ ದಾಳಿಗೆ ದಿಟ್ಟ ಉತ್ತರ ನೀಡಿರುವ ಸೇನಾಪಡೆಗಳು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com