ಇದರಂತೆ ಮಖ್ಬೂಲ್ ಸಾವನ್ನಪ್ಪಿ ಇಂದಿಗೆ 34 ವರ್ಷಗಳು ಕಳೆದಿದ್ದು, ಈ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿರುವ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಈ ಹಿನ್ನಲೆಯಲ್ಲಿ ಶ್ರೀನಗರ ಸೇರಿದಂತೆ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆ ಮತ್ತು ಸೊಪೋರ್ ಟೌನ್ ನಲ್ಲಿ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಹಿರಿಯ ಪ್ರತ್ಯೇಕತಾವಾದಿ ನಾಯಕರಾದ ಸಯ್ಯದ್ ಅಲಿ ಗಿಲಾನಿ, ಮಿರ್ವೈಜ್ ಉಮರ್ ಫರೂಖ್ ಮತ್ತು ಮುಹಮ್ಮದ್ ಯಾಸಿನ ಮಲಿಕ್ ಪ್ರತಿಭಟನೆಯಲ್ಲಿ ಭಾಗಿಯಾದಂತೆ ನೋಡಿಕೊಳ್ಳುವ ಸಲುವಾಗಿ ಗೃಹ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.