ಸುಂಜ್ವಾನ್ ಉಗ್ರರ ದಾಳಿ: ಪಾಕಿಸ್ತಾನದ ದುರ್ವರ್ತನೆಗೆ ನಿರ್ಮಲ್ ಸಿಂಗ್ ತೀವ್ರ ಖಂಡನೆ

ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ದುರ್ವರ್ತನೆಗೆ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ...
ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್
ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್
ಶ್ರೀನಗರ: ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ದುರ್ವರ್ತನೆಗೆ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. 
ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದು ನಿಜಕ್ಕೂ ಖಂಡನೀಯ ವರ್ತನೆ. ಭಾರತವನ್ನು ನೇರವಾಗಿ ಎದುರಿಸಲಾಗದ ಪಾಕಿಸ್ತಾನ, ಉಗ್ರರನ್ನು ಗಡಿ ನುಗ್ಗಿಸಿ ನಾಗರೀಕರ ಮೇಲೆ ದಾಳಿ ಮಾಡುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ. 
ಕ್ಯಾಂಪ್ ಸುತ್ತಮುತ್ತಲೂ ನಾಗರೀಕರ ಪ್ರದೇಶಗಳಿದ್ದು, ಈ ಹಿನ್ನಲೆಯಲ್ಲಿ ಸೇನಾಪಡೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾರ್ಯಾಚರಣೆಗಳನ್ನು ಮುಂದುವರೆಸುತ್ತಿವೆ ಎಂದು ತಿಳಿಸಿದ್ದಾರೆ. 
ನಿನ್ನೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರ ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ ಸುಬೇದಾರ್ ಲಾಲ್ ಚೌಧರಿ ಮತ್ತು ಸುಬೇದಾರ್ ಮೊಹಮ್ಮದ್ ಅಶ್ರಫ್ ಮಿರ್ ಎಂಬ ಅಧಿಕಾರಿಗಳು ಹುತಾತ್ಮರಾಗಿದ್ದಾರೆ, ಅಲ್ಲದೆ, ಓರ್ವ ನಾಗರೀಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಉಗ್ರ ದಾಳಿಗೆ ದಿಟ್ಟ ಉತ್ತರ ನೀಡಿರುವ ಸೇನಾಪಡೆಗಳು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com