ಝಾನ್ಸಿ: ಮುಂಬರುವ ಯಾವುದೇ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಹಾಗೂ ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುವುದಾಗಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಉಮಾಭಾರತಿ, ವಯಸ್ಸು ಮತ್ತು ಆರೋಗ್ಯದ ಕಾರಣದಿಂದಾಗಿ ಚುನಾವಣಾ ಕಣದಿಂದ ದೂರವುಳಿಯಲು ನಿರ್ಧರಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಝಾನ್ಸಿ ಲೋಕಸಭಾ ಕ್ಷೇತ್ರದ 2 ಬಾರಿ ಸಂಸದೆಯಾಗಿ ಆಯ್ಕೆಯಾಗಿದ್ದು, ಪಕ್ಷಕ್ಕಾಗಿ ಅವಿರತವಾಗಿ ದುಡಿದಿರುವುದಾಗಿ ಉಮಾ ಭಾರತಿ ತಿಳಿಸಿದ್ದಾರೆ, ಮಂಡಿ ಹಾಗೂ ಸೊಂಟ ನೋವಿನಿಂದ ಬಳಲುತ್ತಿದ್ದು, ತಮ್ಮ ಅನಾರೋಗ್ಯದ ಕಾರಣದಿಂದಾಗಿ ಚುನಾವಣಾ ಕಣದಿಂದ ದೂರ ಉಳಿಯುತ್ತಿರುವುದಾಗಿ ತಿಳಿಸಿದ್ದಾರೆ.