ತಮಿಳುನಾಡು ವಿಧಾನಸಭೆಯಲ್ಲಿ ಜಯಲಲಿತಾ ಭಾವಚಿತ್ರ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ

ತಮಿಳುನಾಡು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದನ್ನು ವಿರೋಧಿಸಿ ವಿರೋಧ ಪಕ್ಷ ಡಿಎಂಕೆ ...
ಜಯಲಲಿತಾ ಭಾವಚಿತ್ರ
ಜಯಲಲಿತಾ ಭಾವಚಿತ್ರ
ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದನ್ನು ವಿರೋಧಿಸಿ ವಿರೋಧ ಪಕ್ಷ ಡಿಎಂಕೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ.
ಎಐಎಡಿಎಂಕೆ ಮುಖ್ಯಸ್ಥೆ ಹಾಗೂ ಮಾಜಿ ಸಿಎಂ ಜಯಲಲಿತಾ ಅವರ ಬೃಹತ್ ಭಾವಚಿತ್ರವನ್ನು ವಿಧನಸಭೆಯಲ್ಲಿ  ಸ್ಪೀಕರ್ ಪಿ. ಧನಪಾಲ್ ಸೋಮವಾರ ಅನಾವರಣಗೊಳಿಸಿದ್ದರು, ಇದಕ್ಕೆ ಕಾಂಗ್ರೆಸ್ ಮತ್ತು ಡಿಎಂಕೆ ತೀವ್ರ ವಿರೋಧ ವ್ಯಕ್ತ ಪಡಿಸಿ, ಸದನವನ್ನು ಬಹಿಷ್ಕರಿಸಿದ್ದವು.
ಅಕ್ರಮ ಆಸ್ತಿ ಪ್ರಕರಣದಲ್ಲಿ ಜಯಲಲಿತಾ ಅಪರಾಧಿಯಾಗಿದ್ದಾರೆ ಹೀಗಿರುವಾಗ ಅವರು ಈ ಗೌರವಕ್ಕೆ ಅರ್ಹರಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಡಿಎಂಕೆ ಶಾಸಕ ಅನ್ಬಾಗನ್  ಇದನ್ನು ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ಕೂಡಲೇ ತಮಿಳುನಾಡು ವಿಧಾನಸಭೆಯಿಂದ ಜಯಲಲಿತಾ ಭಾವಚಿತ್ರವನ್ನು ತೆರವುಗೊಳಿಸಬೇಕೆಂದು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಡಿಸಿಎಂ ಪನ್ನೀರ್ ಸೆಲ್ವಂ ಅವರ ಉಪಸ್ಥಿತಿಯಲ್ಲಿ ವಿಧಾನಸಭೆಯಲ್ಲಿ ಜಯ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ 10 ಮುಖ್ಯಮಂತ್ರಿಗಳ ಭಾವಚಿತ್ರವನ್ನು ಹಾಕಲಾಗಿದೆ. 
ಜಯಲಲಿತಾ ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದನ್ನು ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್ ಕಪ್ಪು ದಿನ ಎಂದು ಕರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com