ನವದೆಹಲಿ: ಚಲಿಸುತ್ತಿದ್ದ ಬಸ್ ನಲ್ಲಿ ತನ್ನ ಪಕ್ಕದಲ್ಲಿ ಕುಳಿತ ವ್ಯಕ್ತಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಹಾಗೂ ಪದೇ ಪದೇ ತನ್ನ ಸೊಂಟವನ್ನು ಸ್ಪರ್ಷಿಸಲು ಯತ್ನಿಸುತ್ತಿದ್ದ ಎಂದು ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೊಬ್ಬರು ಪೋಲೀಸರಿಗೆ ದೂರಿತ್ತಿದ್ದಾರೆ.
ವಸಂತ್ ವಿಲೇಜ್ ಮತ್ತು ಐಐಟಿ ಗೇಟ್ ನಡುವೆ ಚಲಿಸುತ್ತಿದ್ದ ಬಸ್ ನಲ್ಲಿ ಶುಕ್ರವಾರ ಏಳು ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎಂದು ಎಫ್ ಐಆರ್ ನಲ್ಲಿ ದಾಖಲಾಗಿದೆ. ಸಹ ಪ್ರಯಾಣಿಕರು ಆ ವ್ಯಕ್ತಿಗೆ ಎಚ್ಚರಿಸಿದರೂ ಆತ ಮಾತ್ರ ತಾನುಸಭ್ಯ ವರ್ತನೆಯನ್ನು ಮುಂದುವರಿಸಿದ್ದ ಎಂದು ಎಫ್ ಐಆರ್ ನಲ್ಲಿ ಹೇಳಲಾಗಿದೆ.
ವಸಂತ್ ವಿಲೇಜ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ), 354 ಎ, ಮತ್ತು 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಕೃತ್ಯ) ಗಳ ಅಡಿಯಲ್ಲಿ ಪೋಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಇದೇ ವೇಳೆ ವಿದ್ಯಾರ್ಥಿನಿಯು ಘಟನೆ ಸಂಬಂಧದ ವೀಡಿಯೋ ತುಣುಕನ್ನು ಸಾಮಾಜಿಕ ತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ.