ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ
ದೇಶ
ಯಾವ ಶಕ್ತಿಯೂ ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ: ಫರೂಖ್ ಅಬ್ದುಲ್ಲಾ
ಯಾವುದೇ ಶಕ್ತಿಯೂ ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ ಅವರು ಭಾನುವಾರ ಹೇಳಿದ್ದಾರೆ...
ಲುಧಿಯಾನ: ಯಾವುದೇ ಶಕ್ತಿಯೂ ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ ಅವರು ಭಾನುವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಲ್ಲಿ ಕೆಲ ದಿನಗಳ ಹಿಂದಷ್ಟೇ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ಅಕ್ಬರ್ ಲೋನ್ ಅವರು ಪಾಕಿಸ್ತಾನದ ಪರವಾಗಿ ಘೋಷಣೆಗಳನ್ನು ಕೂಗಿದ್ದರು.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಫರೂಖ್ ಅವರು, ನಾವು ಭಾರತದ ಭಾಗವಾಗಿದ್ದೇವೆ. ಭಾರತದ ಭಾಗವಾಗಿಯೇ ಇರುತ್ತೇವೆ. ಯಾವ ಶಕ್ತಿಯೂ ನಮ್ಮನ್ನು ಭಾರತದಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬಳಿಕ ಅಕ್ಬರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಪಾಕಿಸ್ತಾನದ ಕುರಿತ ಅಕ್ಬಲ್ ಹೇಳಿಕೆ ಪಕ್ಷದ ಹೇಳಿಕೆಯಲ್ಲಿ ಎಂದು ಸ್ಪಷ್ಟಪಡಿಸಿದ್ದಾರೆ.

