ಸೇನಾ ಶಿಬಿರದ ಬಳಿ ಇರುವ ಕಟ್ಟಡಗಳಿಗೆ ಅನುಮತಿ ಇದ್ದು, ತೆರವು ಅಸಾಧ್ಯ: ನಿರ್ಮಲಾ ಸೀತಾರಾಮನ್

ಸೇನಾ ಶಿಬಿರ ಹತ್ತಿರ ಸಂಬಂಧಿತ ಪ್ರಾಧಿಕಾರದಿಂದ ಅನುಮತಿ ಪಡೆದು ನಾಗರಿಕ ಕಟ್ಟಡ ನಿರ್ಮಾಣ ಮಾಡುವುದರಿಂದ ತುಂಬಾ ತೊಂದರೆಯಾಗಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸುಂಜುವಾನ್ ಸೇನಾ ಶಿಬಿರದ ಮೇಲಿನ ಉಗ್ರರ ದಾಳಿಯಲ್ಲಿನ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್  ಚಿತ್ರ
ಸುಂಜುವಾನ್ ಸೇನಾ ಶಿಬಿರದ ಮೇಲಿನ ಉಗ್ರರ ದಾಳಿಯಲ್ಲಿನ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಚಿತ್ರ

ಜಮ್ಮು-ಕಾಶ್ಮೀರ : ಸೇನಾ ಶಿಬಿರ ಹತ್ತಿರ ಸಂಬಂಧಿತ ಪ್ರಾಧಿಕಾರದಿಂದ ಅನುಮತಿ ಪಡೆದು ನಾಗರಿಕ ಕಟ್ಟಡ ನಿರ್ಮಾಣ ಮಾಡುವುದರಿಂದ ತುಂಬಾ ತೊಂದರೆಯಾಗಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸುಂಜುವಾನ್ ಸೇನಾ ಶಿಬಿರದ ಮೇಲಿನ ಉಗ್ರರ ದಾಳಿಯಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಬಂಧಿತ ಪ್ರಾಧಿಕಾರದಿಂದ ಅನುಮತಿ ಪಡೆದು ಇವುಗಳನ್ನು ನಿರ್ಮಾಣ ಮಾಡುವುದರಿಂದ ಅವುಗಳನ್ನು ತೆರವುಗೊಳಿಸುವುದು ಕಷ್ಟಸಾಧ್ಯ. ದೇಶಾದ್ಯಂತ ಇದರ ಬಗ್ಗೆ ಗಮನಹರಿಸಿದ್ದು, ಇದರ  ಬಗ್ಗೆ ಶಾಶ್ವತ ಪರಿಹಾರ ದೊರಕಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

 ಸುಂಜುವಾನ್ ಸೇನಾ ಶಿಬಿರದ ಮೇಲಿನ ದಾಳಿಗೆ ಪಾಕಿಸ್ತಾನವೇ ಕಾರಣ ಎಂದು ಆರೋಪಿಸಿದ ನಿರ್ಮಲಾ ಸೀತಾರಾಮನ್, ತಪ್ಪುದಾರಿಗೆ ಎಳೆಯುತ್ತಿರುವ ಇಸ್ಲಾಮಾಬಾದ್ ಕೆಲವೇ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ. ಭಾರತವೂ ಕೂಡಾ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದರು.  



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com