ಕೊಚ್ಚಿ ಶಿಪ್ ಯಾರ್ಡ್ ನ ನೌಕೆಯಲ್ಲಿ ಸ್ಫೋಟ; 5 ಸಾವು, ಹಲವರಿಗೆ ಗಾಯ

ಕೇರಳದ ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿ ಕನಿಷ್ಠ 11 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಾಗರ್ ಭೂಷಣ್ ಡ್ರಿಲ್ ಶಿಪ್ (ಸಂಗ್ರಹ ಚಿತ್ರ)
ಸಾಗರ್ ಭೂಷಣ್ ಡ್ರಿಲ್ ಶಿಪ್ (ಸಂಗ್ರಹ ಚಿತ್ರ)
ಕೊಚ್ಚಿ: ಕೇರಳದ ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿ ಕನಿಷ್ಠ 11 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳ ವಾರ ಬೆಳಗ್ಗೆ ಕೊಚ್ಚಿ ಶಿಪ್ ಯಾರ್ಡ್ ನಲ್ಲಿದ್ದ ಒಎನ್ ಜಿಸಿ ಸಂಸ್ಥೆಗೆ ಸೇರಿದ ಡ್ರಿಲ್ ಶಿಪ್ 'ಸಾಗರ್ ಭೂಷಣ್' ನೌಕೆಯ ಇಂಧನ ಟ್ಯಾಂಕರ್ ನಲ್ಲಿ ಸ್ಫೋಟ ಸಂಭವಿಸಿದೆ. ಪರಿಣಾಮ ಸ್ಫೋಟದಲ್ಲಿ ಕನಿಷ್ಟ 5 ಮಂದಿ ಸಾವನ್ನಪ್ಪಿ  11ಕ್ಕೂ ಹೆಚ್ಚು ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.
ಅಧಿಕಾರಿಗಳು ತಿಳಿಸಿರುವಂತೆ ಸಾಗರ್ ಭೂಷಣ್ ನೌಕೆ ದುರಸ್ತಿಗಾಗಿ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿತ್ತು. ನೌಕೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲೇ ಸ್ಫೋಟ ಸಂಭವಿಸಿದೆ. ಇಂಧನ ಟ್ಯಾಂಕ್ ಬಳಿ ಸ್ಫೋಟ  ಸಂಭವಿಸಿದ್ದು, ಸ್ಫೋಟಕ್ಕೆ ಶಂಕಿತ ಇಂಧನ ಸೋರಿಕೆ ಕಾರಣವಾಗಿರಬಹುದು ಎನ್ನಲಾಗಿದೆ. ಸ್ಫೋಟ ಸಂಭವಿಸಿದ್ದ ವೇಳೆ ನೌಕೆಯಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ಇದ್ದರು ಎಂದು ಹೇಳಲಾಗುತ್ತಿದ್ದು, ಗಾಯಾಳುಗಳನ್ನು ಕೊಚ್ಚಿ ಆಸ್ಪತ್ರೆಗೆ  ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅಂತೆಯೇ ನೌಕೆಯೊಳಗೆ ಇನ್ನೂ ಇಬ್ಬರು ಸಿಬ್ಬಂದಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com