ಕಾಶ್ಮೀರ: ಕರಣ್ ನಗರ ಎನ್ ಕೌಂಟರ್ ಅಂತ್ಯ, ಇಬ್ಬರು ಉಗ್ರರ ಹತ್ಯೆಗೈದ ಸೇನೆ

ಜಮ್ಮು ಮತ್ತು ಕಾಶ್ಮೀರದ ಕರಣ್ ನಗರ ಜನವಸತಿ ಪ್ರದೇಶದಲ್ಲಿ ಅವಿತಿದ್ದ ಉಗ್ರರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಇಬ್ಬರು ಉಗ್ರರನ್ನು....
ಭದ್ರತಾ ಸಿಬ್ಬಂದಿ
ಭದ್ರತಾ ಸಿಬ್ಬಂದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕರಣ್ ನಗರ ಜನವಸತಿ ಪ್ರದೇಶದಲ್ಲಿ ಅವಿತಿದ್ದ ಉಗ್ರರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. 
ನಿನ್ನೆ ಜಮ್ಮುವಿನ ಕರಣ್ ನಗರದ ಬಳಿ ಇರುವ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ದಾಳಿ ನಡೆಸಿದ ಉಗ್ರರ ವಿರುದ್ಧ ಸೇನೆ ಎನ್ ಕೌಂಟರ್ ಕಾರ್ಯಾಚರಣೆ ಆರಂಭಿಸಿತ್ತು. 
ಸೇನಾ ಶಿಬಿರದೊಳಗೆ ನುಸುಳಲು ಉಗ್ರರು ಪ್ರಯತ್ನಿಸಿದ್ದು, ಉಗ್ರರ ಪ್ರಯತ್ನವನ್ನು ಸೇನಾಪಡೆಗಳು ವಿಫಲಗೊಳಿಸಿವೆ. ಈ ವೇಳೆ  ತಪ್ಪಿಸಿಕೊಳ್ಳುವ ಸಲುವಾಗಿ ಉಗ್ರರು ಕರಣ್ ನಗರದ ಜನವಸತಿ ಪ್ರದೇಶದಲ್ಲಿನ ಮನೆಯೊಳಗೆ ನುಸುಳಿದ್ದು, ಅವಿತಿರುವ ಉಗ್ರರಿಗಾಗಿ ಕಳೆದ 24 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಲಾಗಿದೆ.
ಇತ್ತೀಚೆಗೆ ಬಂದ ವರದಿಗಳ ಪ್ರಕಾರ, ಸೇನಾಪಡೆಗಳು ಇಬ್ಬರು ಉಗ್ರನನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ.
ಕರಣ್ ನಗರದ ಸಮೀಪದಲ್ಲೇ ಸೇನೆಯ ಸಿಆರ್ ಪಿಎಫ್ ಸೇನಾ ಶಿಬಿರವಿದ್ದು, ಇದರೊಳಗೆ ನುಸುಳಿ ದಾಳಿ ಮಾಡಬೇಕು ಎನ್ನುವುದು ಉಗ್ರರ ಯೋಜನೆಯಾಗಿತ್ತು. ಆದರೆ ಇದಕ್ಕೂ ಮೊದಲೇ ಸೇನಾಪಡೆಗಳನ್ನು ಉಗ್ರರನ್ನು  ಗುರುತಿಸುವ ಮೂಲಕ ಆಗಬಹುದಾಗಿದ್ದ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ. ಇನ್ನು ನಿನ್ನೆ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಯುತ್ತಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದು, ಮತ್ತೋರ್ವ ಪೊಲೀಸ್  ಗಾಯಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com