ಮೂಲಗಳ ಪ್ರಕಾರ ಉದ್ಯಮಿ ನೀರವ್ ಮೋದಿ ಅವರಿಗೆ ಸಂಬಂಧಿಸಿದ ಸೂರತ್ ನ ಮೂರು, ಮುಂಬೈನ ನಾಲ್ಕು ಮತ್ತು ದೆಹಲಿಯ 2 ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೀರವ್ ಮೋದಿ ವಿರುದ್ಧ ಸುಮಾರು 11, 300 ಕೋಟಿ ಅಕ್ರಮ ಹಣ ವ್ಯವಹಾರ ಮಾಡಿರುವ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ಉದ್ಯಮಿ ನೀರವ್ ಮೋದಿ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.