1990ರಲ್ಲಿ ರಚಿಸಲಾಗಿದ್ದ ಕಾವೇರಿ ಜಲವಿವಾದ ನ್ಯಾಯಮಂಡಳಿಯು ಸತತ 17 ವರ್ಷಗಳ ಕಾಲ ವಿಚಾರಣೆ ನಡೆಸಿ 2007ರ ಫೆಬ್ರುವರಿ 5ರಂದು ನೀಡಿದ್ದ ಐತೀರ್ಪಿನಲ್ಲಿದ್ದ ಕೆಲವು ಅಂಶಗಳನ್ನು ಒಪ್ಪದೇ ಕಣಿವೆ ವ್ಯಾಪ್ತಿಯ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದವು. ಈ ಸಂಬಂಧ 2017ರ ಜುಲೈ 11ರಿಂದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, 2017ರ ಸೆಪ್ಟೆಂಬರ್ 20ರವರೆಗೆ ಒಟ್ಟು 28 ದಿನ ವಿಚಾರಣೆ ನಡೆಸಿ ತೀರ್ಪನ್ನು ಕಾದಿರಿಸಿತ್ತು.