ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲಾಯೆ ಪಟ್ಟನ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಹಾಗೂ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ಶುಕ್ರವಾರ ತಿಳಿದುಬಂದಿದೆ...
ಶ್ರೀನಗರದ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲಾಯೆ ಪಟ್ಟನ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಹಾಗೂ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ಶುಕ್ರವಾರ ತಿಳಿದುಬಂದಿದೆ.
ಪಟ್ಟನ್ ಪ್ರದೇಶದ ತಾಂತ್ರೆ ಮೊಹಲ್ಲಾ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರನ್ನು ಸದೆಬಡಿಯಲು ಭಾರತೀಯ ಸೇನಾ ಕಾರ್ಯಾಚರಣೆ ನಡೆಸುತ್ತಿವೆ.
ಸೇನಾಪಡೆಗಳು ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಅವಿತು ಕುಳಿತಿರುವ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಇದೀಗ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಪ್ರಸ್ತುತ ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ, ಪ್ರಸ್ತತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.