ಚುನಾವಣಾ ಅಭ್ಯರ್ಥಿಗಳು ತಮ್ಮ ಆದಾಯ ಮೂಲ ಬಹಿರಂಗ ಪಡಿಸುವುದು ಕಡ್ಡಾಯ: ಸುಪ್ರೀಂ ಕೋರ್ಟ್

ಚುನಾವಣೆಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳು ತಮ್ಮ ಆದಾಯ ಮೂಲವನ್ನು ಬಹಿರಂಗ ಪಡಿಸುವುದು ಕಡ್ಡಾಯ ಎಂದು ಸರ್ವೋಚ್ಚ ನ್ಯಾಯಾಲಯ ನಿರ್ದೇಶಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಚುನಾವಣೆಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳು ತಮ್ಮ ಆದಾಯ ಮೂಲವನ್ನು ಬಹಿರಂಗ ಪಡಿಸುವುದು ಕಡ್ಡಾಯ ಎಂದು ಸರ್ವೋಚ್ಚ ನ್ಯಾಯಾಲಯ ನಿರ್ದೇಶಿಸಿದೆ. ಅಭ್ಯರ್ಥಿಗಳ ಸಂಗಾತಿ ಹಾಗೂ ಅವಲಂಬಿತರು ಸಹ ಆದಾಯ ಮೂಲವನ್ನು ಬಹಿರಂಗ ಪಡಿಸಬೇಕೆಂದು ನ್ಯಾಯಾಲಯ ಹೇಳಿದೆ.
ಲೋಕಪ್ರಹರಿ ಎನ್ನುವ ಎನ್ ಜಿಓ ಸಲ್ಲಿಸಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನಿಡಿದೆ.
ನ್ಯಾಯಮೂರ್ತಿಗಳಾದ ಜೆ.ಚೆಲಮೇಶ್ವರ್ ಮತ್ತು ಅಬ್ದುಲ್ ನಜೀರ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ತಈ ರೀತಿ ಅಭಿಪ್ರಾಯ ಪಟ್ಟಿದೆ. ಮ್ಮ ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ, ಅಭ್ಯರ್ಥಿಗಳು ತಮ್ಮ ಸ್ವತ್ತುಗಳನ್ನು, ತಮ್ಮ ಸಂಗಾತಿಯ ಆಸ್ತಿ, ಮಕ್ಕಳು ಮತ್ತು ಇತರ ಅವಲಂಬಿತರ ಹೆಸರಲ್ಲಿರುವ ಆಸ್ತಿ ಬಹಿರಂಗಪಡಿಸಬೇಕಿದೆ. ಆದರೆ ಪ್ರಸ್ತುತ ಅವರು ಆದಾಯ ಮೂಲವನ್ನು ಬಹಿರಂಗಪಡಿಸುತ್ತಿಲ್ಲ ಎಂದು ಹೇಳಿದ್ದ ಎನ್ ಜಿಒ ಅರ್ಜಿಯನ್ನು ವಿಚಾರಣೆ ನಡೆಸಿ ನ್ಯಾಯಪೀಠ ಮೇಲಿನಂತೆ ಆದೇಶ ನಿಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com