ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ಉಭಯ ರಾಷ್ಟ್ರಗಳ ನಡುವೆ ವೈಮಸ್ಸು ಎದುರಾಗಿದ್ದು, ಈ ಹಿನ್ನಲೆಯಲ್ಲಿ ಪಾಕಿಸ್ತಾನಕ್ಕೆ ತೆರಳುವ ಯಾತ್ರಾರ್ಥಿಗಳ ಮೇಲೆ ಭಾರತ ನಿರ್ಬಂಧ ಹೇರಿದ್ದು, ರಾಜಧಾನಿ ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರಿ ಕಚೇರಿಯಲ್ಲಿರುವ ಯಾತ್ರಾರ್ಥಿಗಳ ವಿಸಾ ಅರ್ಜಿಗಳನ್ನು ಹಿಂಪಡೆಯುತ್ತಿದೆ ಎಂದು ಪಾಕಿಸ್ತಾನ ಆರೋಪ ಮಾಡಿತ್ತು.