ಕೆಲ ದಿನಗಳ ಹಿಂದಷ್ಟೇ ಅರುಣಾಚಲಪ್ರದೇಶಕ್ಕೆ ಪ್ರಧಾನಮಂತ್ರಿ ಮೋದಿ ಅವರು ಭೇಟಿ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾ, ಚೀನಾ-ಭಾರತ ಗಡಿಯಲ್ಲಿ ಚೀನಾದ ಸ್ಥಾನ ಸ್ಥಿರ ಮತ್ತು ಸ್ಪಷ್ಟವಾಗಿದೆ. ವಿವಾದಿತ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವುದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ ಮತ್ತು ಈ ಕುರಿತು ರಾಜತಾಂತ್ರಿಕ ಪ್ರತಿಭಟನೆ ದಾಖಲಿಸುವುದಾಗಿ ಹೇಳಿತ್ತು.