ಕಾವೇರಿ ನದಿ ನೀರು ವಿವಾದ; 'ಸುಪ್ರೀಂ' ಐತಿಹಾಸಿಕ ತೀರ್ಪು ಸ್ವಾಗತಿಸಿದ ಪುದುಚೇರಿ ಸಿಎಂ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿಂತೆ ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿಯವರು ಶುಕ್ರವಾರ ಸ್ವಾಗತಿಸಿದ್ದಾರೆ...
ಪುದುಚೇರಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿಂತೆ ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿಯವರು ಶುಕ್ರವಾರ ಸ್ವಾಗತಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನ್ಯಾಯಾಲಯದ ತೀರ್ಪು ಐತಿಹಾಸಿಕವಾಗಿದ್ದು, ತೀರ್ಪಿನಿಂದ ಪುದುಚೇರಿಗೆ ಅನುಕೂಲಕರವಾಗಿದೆ. ಜೊತೆಗೆ ಕಾರೈಕಲ್ ವಲಯದ ರೈತರಿಗೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಅದೇಶವನ್ನು ಕೂಡಲೇ ಕೇಂದ್ರ ಸರ್ಕಾರ ಜಾರಿಗೆ ತರಬೇಕೆಂದು ಇದೇ ವೇಳೆ ನಾರಾಯಣಸ್ವಾಮಿಯವರು ಆಗ್ರಹಿಸಿದ್ದಾರೆ.