ದೆಹಲಿ ವಿವಿ ವಿದ್ಯಾರ್ಥಿನಿ ಎದುರು ಹಸ್ತಮೈಥುನ: ಕಾಮುಕನ ಸುಳಿವು ನೀಡಿದವರಿಗೆ 25 ಸಾವಿರ ರು, ಬಹುಮಾನ

ಕಳೆದ ವಾರ ಬಸ್ ನಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮುಂದೆ ಹಸ್ತ ಮೈಥುನ ಮಾಡಿಕೊಂಡ ಕಾಮುಕನ ಬಗ್ಗೆ ಮಾಹಿತಿ...
ಹಸ್ತ ಮೈಥುನ ಮಾಡಿಕೊಂಡ ಆರೋಪಿ
ಹಸ್ತ ಮೈಥುನ ಮಾಡಿಕೊಂಡ ಆರೋಪಿ
ನವದೆಹಲಿ: ಕಳೆದ ವಾರ ಬಸ್ ನಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮುಂದೆ ಹಸ್ತ ಮೈಥುನ ಮಾಡಿಕೊಂಡ ಕಾಮುಕನ ಬಗ್ಗೆ ಮಾಹಿತಿ ನೀಡಿದವರಿಗೆ 25 ಸಾವಿರ ರುಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಶನಿವಾರ ಘೋಷಿಸಿದ್ದಾರೆ.
ಆರೋಪಿ ಬಗ್ಗೆ ಮಾಹಿತಿ ನೀಡುವವರಿಗೆ 25 ಸಾವಿರ ರುಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಫೆಬ್ರವರಿ 7ರಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಧ್ಯ ವಯಸ್ಸಿನ ವ್ಯಕ್ತಿಯೋರ್ವ ತನ್ನ ಮುಂದೆ ಹಸ್ತ ಮೈಥುನ ಮಾಡಿಕೊಳ್ಳುತ್ತಿರುವುದನ್ನು ವಿದ್ಯಾರ್ಥಿನಿಯ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ ಲೋಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. 
'ಪ್ರಯಾಣಿಕರು ತುಂಬಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದೆ. ಪಕ್ಕ ಕುಳಿತಿದ್ದ ವ್ಯಕ್ತಿಯೊಬ್ಬ ನನ್ನ ಮುಂದೆಯೇ ಹಸ್ತ ಮೈಥುನ ಮಾಡಿಕೊಂಡ. ಆ ದೃಶ್ಯ ಕಂಡು ಅಸಹ್ಯ ಎನ್ನಿಸಿತು. ಅಷ್ಟೆಯಲ್ಲದೆ, ಆತ ನನ್ನ ಸೊಂಟಕ್ಕೆ ಕೈಹಾಕಿ ಲೈಂಗಿಕ ಕಿರುಕುಳ ಕೊಟ್ಟ' ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ವಿದ್ಯಾರ್ಥಿನಿಯ ದೂರಿನನ್ವಯ ದೆಹಲಿಯ ವಸಂತ್ ವಿಹಾರ್ ಪೊಲೀಸರು ಐಪಿಸಿ ಸೆಕ್ಸನ್ 354 (ಲೈಂಗಿಕ ಕಿರುಕುಳ), 354ಎ ಹಾಗೂ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೀಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com