ಉತ್ತಮ ಆಡಳಿತದ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲಾಗುತ್ತದೆ. ಮೂರು ಪ್ರಮುಖ ವಲಯಗಳ ಮೇಲೆ ಗಮನ ಹರಿಸಲಾಗಿದೆ. ಉತ್ತಮ ರಸ್ತೆಗಳು, ವಿದ್ಯುದೀಕರಣ ಮತ್ತು ಪ್ರತೀ ಮನೆಯಲ್ಲಿ ಶೌಚಾಲಯ ಸೌಲಭ್ಯ ಒದಗಿಸುವುದು ನನ್ನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಇದಲ್ಲದೆ, ಸಚಿವೆ ಮನೇಕಾ ಅವರು ಎಲ್ಲಾ ಮನೆಗಳಿಗೂ ವಿದ್ಯುತ್ ಸೌಲಭ್ಯ ನೀಡುವ ಗುರಿಯನ್ನು ಹೊಂದಿರುವ ಸೌಭಾಗ್ಯ ಯೋಜನೆ ಕುರಿತಂತೆಯೂ ಸಭೆಯಲ್ಲಿ ಮಾತನಾಡಿದ್ದಾರೆ.