ಎಫ್ ಐಆರ್ ರದ್ದತಿಗೆ ಒತ್ತಾಯಿಸಿ ನಟಿ ಪ್ರಿಯಾ ವಾರಿಯರ್ ಸುಪ್ರೀಂಗೆ ಅರ್ಜಿ

ನಟಿ ಪ್ರಿಯಾ ಪ್ರಕಾಶ್ ವಾರಿಯರ್ ತೆಲಂಗಾಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸುವಂತೆ ಒತ್ತಾಯಿಸಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಕೇರಳದ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅಭಿಯನದ ಪೂವಿ ಹಾಡಿನ ಚಿತ್ರ
ಕೇರಳದ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅಭಿಯನದ ಪೂವಿ ಹಾಡಿನ ಚಿತ್ರ

ಕೇರಳ:  ಮಲಯಾಳಂನ ಒರು ಅದಾರ್ ಲವ್ ಚಿತ್ರದ ಹಾಡೊಂದರಲ್ಲಿ ತನ್ನ ಆಕರ್ಷಕ ಕಣ್ ಸನ್ನೆ ಮೂಲಕ ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿರುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ತೆಲಂಗಾಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸುವಂತೆ ಒತ್ತಾಯಿಸಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಿಸದಂತೆಯೂ  ತೆಲಂಗಾಣ ರಾಜ್ಯಕ್ಕೆ ನಿರ್ದೇಶಿಸಬೇಕೆಂದು 18 ವರ್ಷದ ಪ್ರಿಯಾ ವಾರಿಯರ್ ಮನವಿ ಮಾಡಿಕೊಂಡಿದ್ದಾರೆ.

ಕೇರಳದ ತ್ರಿಸೂರ್ ಜಿಲ್ಲೆಯ ಕಾಲೇಜೊಂದರಲ್ಲಿ ಬಿ. ಕಾಂ ವ್ಯಾಸಂಗ ಮಾಡುತ್ತಿರುವ ಪ್ರಿಯಾ ವಾರಿಯರ್ ಅಭಿನಯದ ಒರು ಅದಾರ್ ಲವ್ ಚಿತ್ರದ ಮಾಣಿಕ್ಯ ಮಲರಾಯ ಪೂವಿ ಹಾಡಿನಲ್ಲಿ ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಆಕೆಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

 ಆ ವಿಡಿಯೋ ಪ್ರಸಾರಕ್ಕೆ ತಡೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಂಬೈಯ ರಾಜಅಕಾಡೆಮಿ ಕಾರ್ಯದರ್ಶಿಯ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

 ಆಕೆಯ ವಿರುದ್ಧ ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಹಲವು ಕ್ರಿಮಿನಲ್ ಕೇಸ್ ಗಳು ದಾಖಲಾಗಿದ್ದು, ಮಲಯಾಳಂ ಮಾತನಾಡದ ಇತರ ರಾಜ್ಯಗಳಲ್ಲಿಯೂ ಇಂತಹ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ವಕೀಲೆ ಪಲ್ಲವಿ ಪ್ರತಾಪ್ ಮೂಲಕ ಸುಪ್ರೀಂಕೋರ್ಟಿಗೆ ಪ್ರಿಯಾ ವಾರಿಯರ್ ಅರ್ಜಿ ಸಲ್ಲಿಸಿದ್ದಾರೆ.

ಕೇರಳದ ಮಲಬಾರ್ ವಲಯದ ಮುಸ್ಲಿಂ ಸಮುದಾಯದ ಸಂಪ್ರದಾಯ ಕುರಿತಾದ ಈ ಗೀತೆಯ ಸಾಹಿತ್ಯ ವಿರೋಧಿಸಿ ಎಫ್ ಐಆರ್ ದಾಖಲಿಸುತ್ತಿರುವುದಾಗಿ ಅವರು ಹೇಳಿದ್ದು, ತಮ್ಮ ವಿರುದ್ಧದ ಎಫ್ ಐಆರ್ ರದ್ದುಪಡಿಸುವಂತೆ ಸುಪ್ರೀಂಕೋರ್ಟಿನಲ್ಲಿ ಅವರು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com