ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, 3 ನಾಗರಿಕರಿಗೆ ಗಾಯ

ಪಾಕಿಸ್ತಾನ ಸೇನೆ ಸೋಮವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿ, ನಾಗರಿಕರು ಮತ್ತು ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಪಾಕಿಸ್ತಾನ ಸೇನೆ ಸೋಮವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿ, ನಾಗರಿಕರು ಮತ್ತು ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಪಾಕ್ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉರಿ ಸೆಕ್ಟರ್ ಹಜಿಪುರ್ ಪ್ರದೇಶದ ಚುರಂಡದಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಗುಂಡಿನ ದಾಳಿಯಲ್ಲಿ ಗಾಯಗೊಂಡ ನಾಗರಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com