ಕಾನ್ಪುರ: ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರೋಟೋಮ್ಯಾಕ್ ಪೆನ್ ಸಂಸ್ಥೆಯ ಮಾಲೀಕ ವಿಕ್ರಮ ಕೊಠಾರಿ ವಿರುದ್ಧದ ವಂಚನೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಕೊಠಾರಿ ವಂಚನೆ 3,695 ಕೋಟಿ ರುಪಾಯಿಗೆ ತಲುಪಿದೆ.
ಬ್ಯಾಂಕ್ ಗಳಿಗೆ ವಂಚಿಸಿದ ಪ್ರಕರಣಕ್ಕೆ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ ಕಾನ್ಪುರದಲ್ಲಿ ರೋಟೋಮ್ಯಾಕ್ ಗೆ ಸಂಬಂಧಿಸಿದ ಮತ್ತು ಅವರ ಪುತ್ರನಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೊಠಾರಿ ಸೇರಿದಂತೆ ಬ್ಯಾಂಕ್ ನ ಕೆಲವು ಅಧಿಕಾರಿಗಳು ವಿರುದ್ಧವೂ ಎಫ್ ಐಆರ್ ದಾಖಲಿಸಿದೆ.
ಈ ಮುಂಚೆ ಕೊಠಾರಿ ಬ್ಯಾಂಕ್ ಗಳಿಗೆ ಸುಮಾರು 800 ಕೋಟಿ ರುಪಾಯಿ ವಂಚಿಸಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಅದು 3, 695 ಕೋಟಿ ರುಪಾಯಿ ತಲುಪಿದೆ.
ಇನ್ನು ರೋಟೋಮ್ಯಾಕ್ ಸಂಸ್ಥೆಯ ಮಾಲೀಕರು ವಿವಿಧ ಬ್ಯಾಂಕ್ ಗಳಿಂದ ಸುಮಾರು 800 ಕೋಟಿ ರು. ಸಾಲ ಮಾಡಿ ತೀರಸದೇ ನಾಪತ್ತೆಯಾಗಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಕೊಠಾರಿ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೊಠಾರಿ, ತಾವು ದೇಶ ಬಿಟ್ಟು ಹೋಗಿಲ್ಲ. ಕಾನ್ಪುರದಲ್ಲೇ ಇದ್ದೇನೆ ಎಂದು ಹೇಳಿದ್ದಾರೆ.
ಈ ಬಗ್ಗೆ ತಮ್ಮ ಸಂಸ್ಥೆಯ ವಕ್ತಾರರೊಂದಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಕ್ರಮ್ ಕೊಠಾರಿ, ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಗಳೆಲ್ಲಾ ಸುಳ್ಳು. ತಾವು ದೇಶ ಬಿಟ್ಟು ಹೋಗಿಲ್ಲ. ಕಾನ್ಪುರದಲ್ಲೇ ಇದ್ದೇನೆ ಎಂದು ಹೇಳಿದ್ದಾರೆ.