ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ: ಎನ್ ಡಿ ಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ; ಜಗನ್ ರೆಡ್ಡಿ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕುರಿತ ಸಂಬಂಧ, ಒಂದು ವೇಳೆ ಟಿಡಿಪಿ ಬೆಂಬಲ ನೀಡಿದರೇ ಲೋಕಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧ ...
ಜಗನ್ ಮೋಹನ್ ರೆಡ್ಡಿ
ಜಗನ್ ಮೋಹನ್ ರೆಡ್ಡಿ
ಪ್ರಕಾಸಂ( ಆಂಧ್ರ ಪ್ರದೇಶ): ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕುರಿತ ಸಂಬಂಧ, ಒಂದು ವೇಳೆ ಟಿಡಿಪಿ ಬೆಂಬಲ ನೀಡಿದರೇ ಲೋಕಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ವೈಎಸ್ ಆರ್ ಕಾಂಗ್ರೆಸ್ ಮುಖಂಡ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಪ್ರಜಾ ಸಂಕಲ್ಪ ಪಾದಯಾತ್ರೆಯ ಅಂಗವಾಗಿ ಪ್ರಕಾಸಂ ಜಿಲ್ಲೆಯ ಕಂಡಕುರುವಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ  ಮಾತನಾಡಿದ ಜಗನ್ ಮೋಹನ್ ರೆಡ್ಡಿ, ಆಂಧ್ರ ಪ್ರದೇಶದ ಹಿತದೃಷ್ಟಿಯಿಂದ ಎನ್ ಡಿ ಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಟಿಡಿಪಿಗೆ ತಮ್ಮ ಪಕ್ಷ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಕೇವಲ ಟಿಡಿಪಿ ಒಂದಕ್ಕೆ ಇದನ್ನು ಮಾಡಲು ಸಾಧ್ಯವಿಲ್ಲ ಎಂದಿರುವ ಜಗನ್ ಪವನ್ ಕಲ್ಯಾಣ್ ಅವರ ಜನಸೇನಾ ಪಾರ್ಟಿ ಕೂಡ ಬೆಂಬಲ ಸೂಚಿಸಬೇಕು ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ರಾಜ್ಯದ ಟಿಡಿಪಿ ಮತ್ತು ಬಿಜೆಪಿ ಸಂಸದರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆಂಧ್ರ ಪ್ರದೇಶಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಹೆಸರಲ್ಲಿ ರಾಜ್ಯಕ್ಕೆ ದ್ರೋಹ ಮಾಡಬೇಡಿಎಂದು ಆಗ್ರಹಿಸಿರುವ ಅವರು, ರಾಜ್ಯದ 25 ಸಂಸದರು ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com