ದೇಶ

ರಸ್ತೆ ಅಪಘಾತದಲ್ಲಿ ಬಿಜೆಪಿ ಶಾಸಕ ಸೇರಿ ನಾಲ್ವರ ದುರ್ಮರಣ

ರಸ್ತೆ ಅಪಘಾತದಲ್ಲಿ ಬಿಜೆಪಿ ಶಾಸಕ ಸೇರಿ ನಾಲ್ವರ ದುರ್ಮರಣ
ಅಪಘಾತ
Published On :
ಲಖನೌ: ಲಖನೌನಲ್ಲಿ ನಡೆಯುತ್ತಿರುವ ಇನ್ವೆಸ್ಟರ್ ಮೀಟ್ ನಲ್ಲಿ ಭಾಗವಹಿಸುವ ಸಲುವಾಗಿ ತೆರಳುತ್ತಿದ್ದ ಬಿಜೆಪಿ ಶಾಸಕ ಸೇರಿ ನಾಲ್ವರು ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. 
ಉತ್ತರಪ್ರದೇಶದ ಸೀತಾಪುರ ಬಳಿ ಫಾರ್ಚೂನರ್ ಕಾರಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಎದುರಿಗೆ ಬಂದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಿಜನೂರಿನ ಶಾಸಕ ಲೋಕೇಂದ್ರ ಸಿಂಗ್, ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಪೊಲೀಸ್ ಗಾರ್ಡ್ ಗಳಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 
ಮೃತ ಗನ್ ಮ್ಯಾನ್ ಗಳನ್ನು 28 ವರ್ಷದ ಬ್ರಿಜೇಶ್ ಮಿಶ್ರಾ ಮತ್ತು 30 ವರ್ಷದ ದೀಪಕ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಸರಿಕಾ ಮೋಹನ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅನಂದ್ ಕುಲಕರ್ಣಿ ತೆರಳಿ ಪರಿಶೀಲನೆ ನಡೆಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.