ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ವಾಪಾಸ್ : ನಿರುಪಮ್

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ 300 ಕಾರ್ಯಕರ್ತರು ಮತ್ತೆ ಪಕ್ಷಕ್ಕೆ ವಾಪಾಸ್ಸಾಗುತ್ತಿದ್ದಾರೆ ಎಂದು ಮುಂಬೈ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂಜಯ್ ನಿರುಪಮ್ ಹೇಳಿದ್ದಾರೆ.
ಮುಂಬೈ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂಜಯ್ ನಿರುಪಮ್ ಚಿತ್ರ
ಮುಂಬೈ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂಜಯ್ ನಿರುಪಮ್ ಚಿತ್ರ
Updated on: 

ಮುಂಬೈ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ 300 ಕಾರ್ಯಕರ್ತರು ಮತ್ತೆ ಪಕ್ಷಕ್ಕೆ ವಾಪಾಸ್ಸಾಗುತ್ತಿದ್ದಾರೆ ಎಂದು ಮುಂಬೈ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂಜಯ್ ನಿರುಪಮ್ ಹೇಳಿದ್ದಾರೆ.

ಬಿಜೆಪಿಯ ಕಾರ್ಯವಿಧಾನದಿಂದ ಬೇಸತ್ತು ದೆಹಲಿ ನಾಯಕ ಅರ್ ವಿಂದರ್ ಸಿಂಗ್  ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಘರ್ ವಾಪಾಸ್ ಆಗುತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 ಬಿಜೆಪಿಯ ಭ್ರಷ್ಟಾಚಾರ ವಾತಾವರಣದಲ್ಲಿ ಪ್ರಾಮಾಣಿಕರುಕಾರ್ಯನಿರ್ವಹಿಸಲಾಗದಂತಹ ಪರಿಸ್ಥಿತಿಯಿದ್ದು, ಅವರೆಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ನಾಯಕರಾಗಿ ರೂಪುಗೊಳ್ಳಲಿದ್ದಾರೆ ಎಂದರು.
          
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿನ ಗೆಲುವು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸಿಗೆ ಕಾರಣವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದು, ದುರಾಡಳಿತದಿಂದ ಮುಳುಗಿದೆ ಎಂದು ಅವರು ಇದೇ ವೇಳೆ ಆರೋಪಿಸಿದ್ದಾರೆ


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com