ಅಪರಿಚಿತರಿಂದ ಗುಂಡಿಟ್ಟು ಉದ್ಯಮಿ ಹತ್ಯೆ

ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಗುವಾಹಟಿ:  ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ.
ರಾತ್ರಿ ಸುಮಾರು 8.30 ವೇಳೆಗೆ ಅಂಗಡಿ ಮುಚ್ಚಿ ಮನೆಗೆ ವಾಪಸಾಗುತ್ತಿದ್ದ ಹೇಮಂತ್ ಚೌರಾಸಿಯಾ ಎಂಬುವರ ಮೇಲೆ  ಕೈಲಾಸನಗರ ಬಳಿ ಬೈಕ್ ನಲ್ಲಿ ಬಂದ ಅಪರಿಚಿತರು ತೀರಾ ಸಮೀಪದಿಂದ ಗುಂಡು ಹಾರಿಸಿದ್ದಾರೆ. ನಂತರ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಕೂಡಲೇ ಹೇಮಂತ್ ಅವರನ್ನು ದಿಸ್ ಪುರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಆತ ಮೃತ ಪಟ್ಟಿದ್ದರು, ಇನ್ನೂ ಘಟನೆ ನಡೆದ ಸ್ಥಳದಿಂದ ಪೊಲೀಸರು 9ಸಸ ಪಿಸ್ತೂಲ್ ವಶ ಪಡಿಸಿಕೊಂಡಿದ್ದಾರೆ, ಜೊತೆಗೆ 1 ಲಕ್ಷ ರು ಹಣವಿದ್ದ ಬ್ಯಾಗ್ ಕೂಡ ಪೊಲೀಸರ ವಶದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com