ಆಪ್ ಶಾಸಕರು ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದನ್ನು ನೋಡಿದ್ದೇನೆ: ಸಿಎಂ ಸಲಹೆಗಾರ

ಆಮ್ ಆದ್ಮಿ ಪಕ್ಷದ ಶಾಸಕರು ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದನ್ನು ಸ್ವತಃ ನೋಡಿರುವುದಾಗಿ ದೆಹಲಿ ಮುಖ್ಯಮಂತ್ರಿಗಳ ಸಲಹೆಗಾರ ವಿಕೆ ಜೈನ್ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕರು ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದನ್ನು ಸ್ವತಃ ನೋಡಿರುವುದಾಗಿ ದೆಹಲಿ ಮುಖ್ಯಮಂತ್ರಿಗಳ ಸಲಹೆಗಾರ ವಿಕೆ ಜೈನ್ ಹೇಳಿದ್ದಾರೆ.

ಪೊಲೀಸರೆದುರು ಹೇಳಿಕೆ ನೀಡಿರುವ ವಿಕೆ ಜೈನ್, ಆಮ್ ಆದ್ಮಿ ಪಕ್ಷದ ಶಾಸಕರಾದ ಅಮಾನತ್-ಉಲ್ಲಾ ಖಾನ್ ಹಾಗೂ ಪ್ರಕಾಶ್ ಜರ್ವಾಲ್ ಮುಖ್ಯ ಕಾರ್ಯದರ್ಶಿಗಳ ಮೇಲೆ ದೈಹಿಕ ಹಲ್ಲೆ ನಡೆಸಿದ್ದರು ಎಂದಿದ್ದಾರೆ.

ಆಮ್ ಆದ್ಮಿ ಪಕ್ಷ ವಿಕೆ ಜೈನ್ ಹೇಳಿಕೆಯನ್ನು ತಿರಸ್ಕರಿಸಿದ್ದು, ವಿಕೆ ಜೈನ್ ಪ್ರಾರಂಭಿಕ ಹಂತದಲ್ಲಿ ಈ ರೀತಿಯ ಹೇಳಿಕೆ ನೀಡಿರಲಿಲ್ಲ, ನಂತರ ಪೊಲೀಸರ ಒತ್ತಡಕ್ಕೆ ಮಣಿದು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡಿದೆ.

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಮ್ ಆದ್ಮಿ ಪಕ್ಷದ ಶಾಸಕರು ಮುಖ್ಯಮಂತ್ರಿ ಎದುರೇ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com