ಒಂದೆಡೆ ಸೇನಾಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರೆ, ಮತ್ತೊಂದೆಡೆ ಗ್ರಾಮದಲ್ಲಿರುವ ಯುವಕರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಕಲ್ಲು ತೂರಾಟವನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹರಸಾಹಸ ಪಡುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.