ಉತ್ತರಪ್ರದೇಶ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಗಳ ತಂಡವೊಂದು ಬೆಂಕಿ ಹಚ್ಚಿರುವ ಘಟನೆಯೊಂದು ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯ ಬಾರ ಸಗ್ವಾರ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಉನ್ನಾವೋ: ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಗಳ ತಂಡವೊಂದು ಬೆಂಕಿ ಹಚ್ಚಿರುವ ಘಟನೆಯೊಂದು ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯ ಬಾರ ಸಗ್ವಾರ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ. 
ಮಹಿಳೆ ಸ್ಥಳೀಯ ಮಾರುಕಟ್ಟೆಯೊಂದಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರ್ಗದ ಮಧ್ಯೆ ಮಹಿಳೆಯನ್ನು ತಡೆದಿರುವ ದುಷ್ಕರ್ಮಿಗಳು ಆಕೆಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ. 
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. 
ಪ್ರಕರಣ ಸಂಬಂಧ ಎಲ್ಲಾ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಲಖನೌ ಐಜಿ ಸುಜಿತ್ ಪಾಂಡೇ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com