ಮಥುರಾ: ರಾಜ್ಯದ ಧಾರ್ಮಿಕ ಸ್ಥಳಗಳನ್ನ ವಿಶ್ವದರ್ಜೆಯ ಪ್ರವಾಸಿ ಸ್ಥಳಗಳನ್ನಾಗಿ ಅಭಿವೃದ್ದಿ ಪಡಿಸಲು ಯತ್ನಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಕೃಷ್ಣ ಜನ್ಮಭೂಮಿ ಮಥರಾಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ . ಈ ಸ್ಥಳಕ್ಕೆ ಭೇಟಿ ನೀಡಲು ಅವಕಾಶ ಸಿಕ್ಕಿದೆ ಹಾಗೂ ಧಾರ್ಮಿಕ ಸ್ಥಳಗಳನ್ನು ಉನ್ನತ ದರ್ಜೆಗೇರಿಸಲು ನಾನು ಪ್ರಯತ್ನಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಈದ್ ಆಲ್ ಫಿತರ್ ಆಚರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯೋಗಿ ಆದಿತ್ಯನಾಥ್, ಭಾರತ ಜಾತ್ಯತೀತ ದೇಶ, ಹೀಗಾಗಿ ರಾಜ್ಯದಲ್ಲಿ ಆಚರಿಸುವುದನ್ನು ತಾವು ತಡೆಯುವುದಿಲ್ಲ ಎಂದು ಹೇಳಿದ್ದಾರೆ.
ಕಳೆದ 11 ತಿಂಗಳಲ್ಲಿ ತಮ್ಮ ರಾಜ್ಯದಲ್ಲಿ ಈದ್ ಉಲ್ ಫಿತರ್ ಅಥವಾ ಕ್ರಿಸ್ ಮಸ್ ಆಚರಿಸುವುದನ್ನು ತಡೆದಿಲ್ಲ, ನಾನು ಹಿಂದು, ದೇಶದಲ್ಲಿ ವಾಸವಿರುವ ಪ್ರತಿಯೊಬ್ಬರು ತಮ್ಮ ಧಾರ್ಮಿಕ ಆಚರಣೆ ನಡೆಸುವ ಹಕ್ಕಿದೆ, ನನ್ನ ಸಂಸ್ಕೃತಿ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ.
ಇನ್ನೂ ಧಾರ್ಮಿಕ ಸ್ಥಳಗಳಿಗೆ ಅಗತ್ಯವಾದ ಎಲ್ಲಾ ಸೌಲಭ್ಯ ಹಾಗೂ ಭದ್ರತೆ ಒದಗಿಸಲಾಗುವುದು ಎಂದು ವಿವರಿಸಿದ್ದಾರೆ.